ಚಿಕ್ಕಮಾಳಿಗೆಕೊಪ್ಪಲಿನ ಸರ್ಕಾರಿ ಶಾಲೆಯಲ್ಲಿ ಕೊಠಡಿಯನ್ನು ಶಾಸಕರಿಂದ ಉದ್ಘಾಟನೆ

| Published : Mar 10 2025, 12:20 AM IST

ಚಿಕ್ಕಮಾಳಿಗೆಕೊಪ್ಪಲಿನ ಸರ್ಕಾರಿ ಶಾಲೆಯಲ್ಲಿ ಕೊಠಡಿಯನ್ನು ಶಾಸಕರಿಂದ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಮಳವಳ್ಳಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಪಂಚಾಯ್ತಿ ವ್ಯಾಪ್ತಿ ಮಲ್ಟಿ ಮೀಡಿಯಾ ಸೆಂಟರ್ ತೆರದು ಸರ್ಕಾರಿ ಶಾಲೆಗಳ ಮಕ್ಕಳಿಗೆ ಖಾಸಗಿ ಶಾಲೆಗಳಿಂತ ಉನ್ನತವಾಗಿ ಶಿಕ್ಷಣ ಕೊಡಿಸಲು ಮುಂದಾಗುತ್ತೇವೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಖಾಸಗಿ ಶಾಲೆಗಳಿಗೆ ಪೈಪೊಟಿ ನೀಡುವ ರೀತಿಯಲ್ಲಿ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಸೌಲಭ್ಯ ಕಲ್ಪಿಸುವ ಮೂಲಕ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಉನ್ನತ್ತೀಕರಿಸಿದ ಸರ್ಕಾರಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಪಂಚಾಯ್ತಿ ವ್ಯಾಪ್ತಿ ಮಲ್ಟಿ ಮೀಡಿಯಾ ಸೆಂಟರ್ ತೆರದು ಸರ್ಕಾರಿ ಶಾಲೆಗಳ ಮಕ್ಕಳಿಗೆ ಖಾಸಗಿ ಶಾಲೆಗಳಿಂತ ಉನ್ನತವಾಗಿ ಶಿಕ್ಷಣ ಕೊಡಿಸಲು ಮುಂದಾಗುತ್ತೇವೆ ಎಂದರು.

ಮುಂದಿನ ಅಕ್ಟೋಬರ್ ವೇಳೆಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಸೌಲಭ್ಯ ಕಲ್ಪಿಸಿ ಆಧುನಿಕ ಶಿಕ್ಷಣ ವ್ಯವಸ್ಥೆ ಮೂಲಕ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆ ತಯಾರು ಮಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಅರಿವು ಮೂಡಿಸಲಾಗುವುದು. ಆ ನಿಟ್ಟಿನಲ್ಲಿ ಈಗಾಗಲೇ ಬಹುತೇಕ ಶಾಲೆಗಳಿಗೆ ಟ್ಯಾಬ್ ವಿತರಿಸಲಾಗಿದೆ ಎಂದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಕಲ್ಕುಣಿ ಗ್ರಾಪಂ ಅಧ್ಯಕ್ಷೆ ಹೇಮಾವತಿ, ಶಿಕ್ಷಣ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣಾಸಕ್ತ ಚಿನ್ನಾಳು, ಮುಖ್ಯಶಿಕ್ಷಕಿಯರಾದ ಸುಕನ್ಯಾ, ಎಚ್.ಎಂ.ಲತಾ, ಎಸ್ಡಿಎಂಸಿ ಅಧ್ಯಕ್ಷ ಟಿ.ವೆಂಟಕೇಶ್, ಮುಖಂಡ ಕೃಷ್ಣಮೂರ್ತಿ, ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಮುಖಂಡರು ಇದ್ದರು.

ಸರ್ಕಾರಿ ಶಾಲಾ ನೂತನ ಕಟ್ಟಡ ಉದ್ಘಾಟನೆ

ಮಂಡ್ಯ: ತಾಲೂಕಿನ ಕನ್ನಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ನೂತನ ಶಾಲಾ ಕಟ್ಟಡವನ್ನು ಶಾಸಕ ಪಿ.ರವಿಕುಮಾರ್ ಉದ್ಘಾಟಿಸಿದರು. ಸರ್ಕಾರದಿಂದ 1 ಕೋಟಿ ರು. ವೆಚ್ಚದಲ್ಲಿ 6 ಸುಸರ್ಜಿತವಾದ ಕೊಠಡಿಗಳು ನಿರ್ಮಾಣ ಮಾಡಿದ್ದು, ಇಂದು ನೂತನ ಕಟ್ಟಡ ಉದ್ಘಾಟನೆಗೊಂಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಓದಿನ ಕಡೆ ಗಮನ ಹರಿಸಿ ಅತ್ಯುತ್ತಮ ಅಂಕ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಪೋಷಕರಿಗೆ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಅಶಾ ಚಂದನ್, ಮುಖಂಡರಾದ ಚಂದ್ರಶೇಖರ್. ಮಲ್ಲರಾಜು ಮುಖ್ಯ ಶಿಕ್ಷಕಿ ಸುಮಿತ್ರ ಎಸ್ ಡಿ ಎಮ್ ಸಿ ಅಧ್ಯಕ್ಷ ಧನಂಜಯ್ ಭಾಗವಹಿಸಿದ್ದರು.