ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದಲ್ಲಿ ವಾಸಿಸುತ್ತಿರುವ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಸಂಬಂಧ ಪಟ್ಟಣದ ಪುರಸಭೆ ವ್ಯಾಪ್ತಿಯ ಶಾಂತಿ ಕಾಲೇಜು ಮುಂಭಾಗದ ಖಾಲಿ ನಿವೇಶನವನ್ನು ಅಧಿಕಾರಿಗಳೊಂದಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪರಿಶೀಲಿಸಿ, ಚರ್ಚೆ ನಡೆಸಿದರು.ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಖಾಲಿ ನಿವೇಶನವನ್ನು ಬಿಪಿಎಲ್ ಚೀಟಿ ಹೊಂದಿರುವ ಬಡವರಿಗೆ ಹಂಚಿಕೆ ಮಾಡಲು ಈಗಾಗಲೇ ಅರ್ಜಿ ಅಹ್ವಾನಿಸಲಾಗಿದೆ ಎಂದರು.
ಶೀಘ್ರದಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು. ಈಗಾಗಲೇ ರಾಜೀವ್‌ಗಾಂಧಿ ವಸತಿ ನಿಗಮದ ಅಧಿಕಾರಿಗಳು ಭೇಟಿ ನೀಡಿ ನಿವೇಶನಕ್ಕೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.ಪುರಸಭೆಯಿಂದ ಕಾನೂನು ತೊಡಕುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಅವರಿಗೆ ಸೂಚಿಸಿದರು.
ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಶಾಂತಿ ಕಾಲೇಜು ನಿವೇಶನ ಹಾಗೂ ಮಾರೇಹಳ್ಳಿ ಬೀರೇಶ್ವರ ದೇವಸ್ಥಾನದ ಸಮೀಪ ಇರುವ ಬಡಾವಣೆ ಪರಿಶೀಲನೆ ನಡೆಸಿ ಬಡಾವಣೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸುವಂತೆ ಹೇಳಿದರು.ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ತಾಪಂ ಇಒ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.
ಅ.7 ರಂದು ವಾಲ್ಮೀಕಿ ಜಯಂತಿ ಆಚರಣೆಗಾಗಿ ಶಾಸಕರಿಂದ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ಅ.7ರಂದು ನಡೆಯುವ ವಾಲ್ಮೀಕಿ ಜಯಂತಿ ಅಂಗವಾಗಿ ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು.ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿ, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯಗಳ ವರ್ಗದವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು. ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಬಾರದು ಎಂದು ಸೂಚಿಸಿದರು.
ಮಹನೀಯರ ಆದರ್ಶ ತಿಳಿದುಕೊಂಡು ಅವರಂತೆ ಉತ್ತಮ ಜೀವನ ನಡೆಸಿ ಒಳ್ಳೆಯ ಹೆಸರು ಪಡೆದುಕೊಳ್ಳಬೇಕು. ಹೀಗಾಗಿ ಕಾರ್ಯಕ್ರಮವನ್ನು ಅರ್ಥಪೂರ್ಣ, ಯಶಸ್ವಿಯಾಗಿ ನಡೆಸಬೇಕು ಎಂದರು.ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಕೆ.ದಿವಾಕರ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಪುರಸಭಾ ಸದಸ್ಯರಾದ ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಬಿಇಒ ವೈ.ಕೆ.ತಿಮ್ಮೇಗೌಡ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಪಶು ವೈದ್ಯಾಧಿಕಾರಿ ಎಚ್.ಎಸ್.ದೇವರಾಜು, ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ ಸಿದ್ದಯ್ಯ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಕೇಶ್, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.