ಕನ್ನಡಪ್ರಭ ವಾರ್ತೆ ಹಾಸನ
ಪುರದಮ್ಮ ದೇವಸ್ಥಾನಕ್ಕೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದಲ್ಲೂ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಾರೆ. ಹಾಗಾಗಿ ಅಲ್ಲಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸುವಂತೆ ಶಾಸಕರಾದ ಸ್ವರೂಪ್ ಪ್ರಕಾಶ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕರಾದ ಸ್ವರೂಪ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಪುರದಮ್ಮ ದೇವಸ್ಥಾನ ಹಣವನ್ನು ಬೇರೆಯ ಯಾವುದೇ ಇತರೆ ಕಾಮಗಾರಿಗಳಿಗೆ ಬಳಕೆ ಮಾಡಬಾರದು, ದೇವಸ್ಥಾನದ ಮೂಲಭೂತ ಸೌಕರ್ಯಗಳೀಗೆ ಹಾಗೂ ದೇವಸ್ಥಾನ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು, ದೇವಾಸ್ಥಾನದ ಹುಂಡಿ ಎಣಿಕೆಯನ್ನು ಸಂದರ್ಭದಲ್ಲಿ ಸ್ಥಳೀಯರು ಸಮ್ಮುಖದಲ್ಲಿ ಎಣಿಕೆ ಮಾಡಬೇಕು ಎಂದು ತಿಳಿಸಿದರು. ನಗರದ ಸುಭಾಷ್ ಚೌಕದಲ್ಲಿರುವ ಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಿಗೆರೆ ದೇವಸ್ಥಾನದಲ್ಲಿರುವ ಪಾರ್ಕಿಂಗ್‌ಗೆ ಟೆಂಡರ್ ಕರೆದು ಶುಲ್ಕ ನಿಗದಿಪಡಿಸಬೇಕು ಎಂದರು. ಬಗರ್‌ಹುಕುಂನಲ್ಲಿ ಅರ್ಜಿ ಸಲ್ಲಿಸಿರುವ ಸಂಬಂಧಿಸಿದಂತೆ ಮಂಜೂರಾತಿಗೆ ಕ್ರಮ ವಹಿಸಬೇಕು. ದುರಸ್ತಿ ಸಂಬಂಧಿಸಿದಂತೆ ಕಂದಾಯ ಸಚಿವರು ನಿರ್ದೇಶನದಂತೆ ಕನಿಷ್ಠ ೨ ದಾಖಲೆಗಳಿರುವ ಹಾಗೂ ದಾಖಲೆಗಳು ಇಲ್ಲದಿರುವ ಸಂದರ್ಭದಲ್ಲಿ ಮಿಸ್ಸಿಂಗ್ ಸಮಿತಿಯ ಮುಂದೆ ಇಟ್ಟು ಪರಿಶೀಲಿಸಿ ತುರ್ತಾಗಿ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಮಹಾನಗರ ಪಾಲಿಕೆಗೆ ಸೇರ್ಪಡೆಯಾಗಿರುವ ನೂತನ ಗ್ರಾಮಗಳಿಗೆ ಇ-ಸ್ವತ್ತು ನೀಡುವ ಸಲುವಾಗಿ, ವಾಣಿಜ್ಯ ಮಳಿಗೆಗಳಿಗೆ ಹರಾಜು ಪ್ರಕ್ರಿಯೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು ಶಾಸಕರು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಮಾತನಾಡಿ, ಪುರದಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲಕ್ಕಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು, ಕಸದ ನಿರ್ವಹಣೆ ಆಗಬೇಕು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು. ಪುರದಮ್ಮ ದೇವಸ್ಥಾನ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಸಭೆಯನ್ನು ನಡೆಸುವಂತೆ ತಿಳಿಸಿದರು. ದೇವರ ಹೆಸರಿನಲ್ಲಿ ನೀಡುವ ಕಾಣಿಕೆಗಳನ್ನು ಪರಿಶೀಸಬೇಕು. ದೇವಿಗೆರೆ ದೇವಸ್ಥಾನದಲ್ಲಿ ಆವರಣದಲ್ಲಿ ಪಾಕಿಂಗ್ ಟೆಂಡರ್ ಪ್ರಕ್ರಿಯೆ ಪೂರ್ಣಗೊಸಬೇಕು. ದೇವಿಗೆರೆ ದೇವಸ್ಥಾನದಲ್ಲಿ ಶಿಲಾವ್ಯಸ್ಥೆಯಗಿದ್ದಲ್ಲಿ ಸರಿಪಡಿಸುವಂತೆ ಹಾಗೂ ದೇವಸ್ಥಾನದ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರುದ್ರಮುನಿ, ಮಹಾನಗರ ಪಾಲಿಕೆಯ ಆಯುಕ್ತರಾದ ಕೃಷ್ಣಮೂರ್ತಿ, ತಹಸೀಲ್ದಾರ್ ಗೀತಾ, ಮುಜರಾಯಿ ಇಲಾಖೆಯ ತಹಸೀಲ್ದಾರ್ ಲತಾ ಹಾಗೂ ಮತಿತ್ತರರು ಉಪಸ್ಥಿತರಿದ್ದರು.