ಹಾರಂಗಿ ಮಳೆ ಹಾನಿ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿಗೆ ಶಾಸಕ ಸೂಚನೆ

| Published : Aug 06 2024, 12:36 AM IST

ಹಾರಂಗಿ ಮಳೆ ಹಾನಿ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿಗೆ ಶಾಸಕ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಳೆ ಹಾನಿ ಆಗಿರುವ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಕೈಗೆತ್ತಿಕೊಂಡು ಸರಿಪಡಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಹಾರಂಗಿ ಅಣೆಕಟ್ಟು ಅಚ್ಚುಕಟ್ಟು ಪ್ರದೇಶದ ಕಾಲುವೆ ಮತ್ತು ಮಳೆ ಹಾನಿ ಆಗಿರುವ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಕೈಗೆತ್ತಿಕೊಂಡು ಸರಿಪಡಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಣೆಕಟ್ಟು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಕಾಲುವೆ ಕಾಮಗಾರಿ ಎರಡು ಕಡೆ ಕುಸಿದಿದ್ದು ಕೂಡಲೇ ಅದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆ ಮೂಲಕ ಇತ್ತೀಚೆಗೆ ನೀರುಹರಿಸಲಾಗಿದ್ದು ಯೋಜನಾ ವೃತ್ತದ ಕೊನೆಯ ಹಂತದ ತನಕ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಚ್ಚುಕಟ್ಟು ವ್ಯಾಪ್ತಿಯ ಕೃಷಿ ಚಟುವಟಿಕೆಗಳಿಗೆ ಹಾಗೂ ಕಾಲುವೆ ಬದಿಯ ನಿವಾಸಿಗಳಿಗೆ ಯಾವುದೇ ರೀತಿಯ ಅನನುಕೂಲ ಉಂಟಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.