ಸಾರಾಂಶ
ಕಾಲುವೆಯಲ್ಲಿ ಹುಲ್ಲು, ಹೂಳು ತುಂಬಿಕೊಂಡಿದ್ದರಿಂದ ನೀರು ಸರಬರಾಜಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಶಾಸಕರು ಕೂಡಲೇ ಕಾಲುವೆಯ ದುರಸ್ತಿ ಕಾಮಗಾರಿ ಆರಂಭಿಸಿ ಮೇ ತಿಂಗಳ ಅಂತ್ಯದೊಳಗೆ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಿ, ರೈತರಿಗೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಗಂಗಾವತಿ: ಇಲ್ಲಿಯ ಹಿರೇಜಂತಗಲ್ ಬಳಿಯ ವಿಜಯನಗರ ಕಾಲುವೆಯನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ವೀಕ್ಷಿಸಿದರು.ಕಾಲುವೆಯಲ್ಲಿ ಹುಲ್ಲು, ಹೂಳು ತುಂಬಿಕೊಂಡಿದ್ದರಿಂದ ನೀರು ಸರಬರಾಜಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಶಾಸಕರು ಕೂಡಲೇ ಕಾಲುವೆಯ ದುರಸ್ತಿ ಕಾಮಗಾರಿ ಆರಂಭಿಸಿ ಮೇ ತಿಂಗಳ ಅಂತ್ಯದೊಳಗೆ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಿ, ರೈತರಿಗೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶಂಕರಗೌಡ, ಕೆಆರ್‌ಪಿಪಿ ರಾಜ್ಯ ಉಪಾಧ್ಯಕ್ಷ ಮನೋಹರ್ ಗೌಡ, ಅಲಿಖಾನ್, ದುರಗಪ್ಪ ದಳಪತಿ, ವೀರೇಶ್ ಬಲಕುಂದಿ, ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.