ಸಾರಾಂಶ
ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ, ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ ಎಂದು ಕಾಮತ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ, ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದರು.ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರುನಾಮಕರಣಕ್ಕೆ ಯಾವೆಲ್ಲಾ ಕ್ರಮಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ, ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ ನಾನು ಬದ್ಧನಾಗಿದ್ದೇನೆ. ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.