ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಮದ್ದೂರನ್ನು ಮಾದರಿ ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಗುಣಮಟ್ಟದ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸಮೀಪದ ತೊರೆಬೊಮ್ಮನಹಳ್ಳಿ-ಸುಣ್ಣದದೊಡ್ಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ವತಿಯಿಂದ ಸುಮಾರು 55 ಲಕ್ಷ ರು. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿ, ರಸ್ತೆ, ಚರಂಡಿ ಅಭಿವೃದ್ಧಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಈಗ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಶಾಸಕರು, ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಪಕ್ಷ, ಜಾತಿ ಭೇದ ಮರೆತು ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಕೆಡಿಪಿ ಸಮಿತಿ ಸದಸ್ಯ ಅಭಿಷೇಕ, ಮುಖಂಡರಾದ ವೆಂಕಟೇಶ್, ರಾಜೇಂದ್ರ, ಸುಣ್ಣದದೊಡ್ಡಿ ಮಹೇಶ್, ಶ್ರೀಕಂಠೇಗೌಡ, ಹೊನ್ನಪ್ಪ, ಎ.ಟಿ.ರಮೇಶ್, ಟಿ.ಬಿ.ಸಂತೋಷ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೊಲೆರೋ ವಾಹನ ಹರಿದು 10 ಕುರಿಗಳು ಸ್ಥಳದಲ್ಲೇ ಸಾವುಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಅಡ್ಡಾದಿಡ್ಡಿ ಚಲಿಸಿದ ಬೊಲೆರೋ ವಾಹನ ಕುರಿಗಳ ಹಿಂಡಿನ ಮೇಲೆ ಹರಿದು 10 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ತಾಲೂಕಿನ ಹೇಮಗಿರಿ ಸಮೀಪ ಇರುವ ಕುಂದನಹಳ್ಳಿ ಗೇಟ್ ಬಳಿ ನಡೆದಿದೆ.ಕಾರು ಚಾಲಕನ ಅಜಾಗರೂಕತೆಯಿಂದ 10 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ 11 ಕುರಿಗಳ ಸ್ಥಿತಿ ಗಂಭೀರವಾಗಿದೆ.
ತುಮಕೂರು ಮೂಲದ ಕುರಿಗಾಹಿ ಈರಣ್ಣರಿಗೆ ಸೇರಿದ ಕುರಿಗಳಾಗಿವೆ. ಕುರಿಗಾಹಿಗಳ ರೋಧನ ಮನ ಕಲಕುವಂತಿತ್ತು. ಇದರಿಂದ ಸುಮಾರು 3 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಈರಣ್ಣ ತಿಳಿಸಿದರು.ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಪಶುವೈದ್ಯ ಇಲಾಖೆ ವೈದ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸತ್ತ ಹಾಗೂ ಗಾಯಗೊಂಡ ಕುರಿಗಳ ಮಾಹಿತಿಯನ್ನು ಕಲೆಹಾಕಿದರು.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು ಬೊಲೆರೋ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದಾರೆ.