ಮದ್ದೂರು: ರಸ್ತೆಗಳು ಅಭಿವೃದ್ಧಿಯ ಸಂಕೇತ. ಸರ್ಕಾರದಿಂದ ಕೋಟ್ಯಂತರ ರು. ಅನುದಾನ ಕಾಮಗಾರಿ ಕೈಗೊಂಡಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಚುಂಚಗಹಳ್ಳಿ, ಆಲೂರುದೊಡ್ಡಿ, ಆಲೂರು ಹಾಗೂ ಬೂದಗುಪ್ಪೆ ಗ್ರಾಮಗಳಲ್ಲಿ ₹1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದರೆ ಸ್ಥಳೀಯ ಜನರಿಗೆ ಹಾಗೂ ವಾಹನ ಸವಾರರಿಗೆ ಹಲವು ಅನುಕೂಲವಾಗುತ್ತದೆ. ಜತೆಗೆ ಆರ್ಥಿಕ ಪರಿಸ್ಥಿತಿಯೂ ಸುಧಾರಿಸುತ್ತದೆ ಎಂದರು.ತಾಲೂಕಿನ ಪ್ರತಿ ಗ್ರಾಮಗಳಲ್ಲೂ ರಸ್ತೆಗಳ ಅಭಿವೃದ್ಧಿ ಮಾಡಬೇಕು, ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪಟ್ಟಿ ಮಾಡಿಕೊಂಡು ಆದ್ಯತೆ ಮೇರೆಗೆ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ರಸ್ತೆಗಳು, ಚರಂಡಿಗಳು, ನೀರಾವರಿ, ಶಿಕ್ಷಣ, ಕುಡಿಯುವ ನೀರು ಸೇರಿ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಗಮನ ನೀಡಲಾಗಿದೆ. ಸರ್ಕಾರದಿಂದ ₹1800 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮಾಡುವ ಮೂಲಕ ರಾಜ್ಯಕ್ಕೆ ಮಾದರಿ ತಾಲೂಕನ್ನಾಗಿ ಮಾಡುವುದೇ ನನ್ನ ಗುರಿಯಾಗಿದೆ ಎಂದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜು, ಮನ್ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾಪಂ ಮಾಜಿ ಅಧ್ಯಕ್ಷರಾದ ಉದಯ್, ಸಂದೀಪ್, ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚಲುವರಾಜು, ಮುಖಂಡರಾದ ಬಿ.ಎಚ್.ರೇವಣ್ಣ, ಉಮೇಶ್, ಬಿ.ಎಚ್.ರಾಮಕೃಷ್ಣ, ಬಿ.ಎಲ್.ಪುಟ್ಟಲಿಂಗಯ್ಯ, ಬಿ.ಪಿ.ಶಂಕರ್, ಬಿ.ಎಸ್.ಮಹದೇವಯ್ಯ, ಸುರೇಶ್, ಮಾದೇಶ್, ಬಿ.ಎಲ್.ಸತೀಶ್, ಜಯರಾಮು, ಸಿದ್ದೇಗೌಡ ಹಾಜರಿದ್ದರು.
----------
25ಕೆಎಂಎನ್ ಡಿ25
ಮದ್ದೂರು ತಾಲೂಕು ಬೂದಗುಪ್ಪೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.