ಕ್ಷೇತ್ರದಲ್ಲಿ ಸೂರಿಲ್ಲದ ಮತ್ತು ನಿವೇಶನ ರಹಿತರಿಗೆ ಶೀಘ್ರ ನಿವೇಶನ ಕೊಡುವುದಾಗಿ ಶಾಸಕ ಕೆ.ಎನ್.ರಾಜಣ್ಣ ಭರವಸೆ ನೀಡಿದರು. ಇಲ್ಲಿನ ಎಸಿ ಕಚೇರಿ ಸಭಾಂಗಣದಲ್ಲಿ ಈಚೆಗೆ ತಾಲೂಕಿನಲ್ಲಿರುವ ವಸತಿ ಮತ್ತು ನಿವೇಶನ ರಹಿತ ಫಲಾನುಭವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಧುಗಿರಿ
ಕ್ಷೇತ್ರದಲ್ಲಿ ಸೂರಿಲ್ಲದ ಮತ್ತು ನಿವೇಶನ ರಹಿತರಿಗೆ ಶೀಘ್ರ ನಿವೇಶನ ಕೊಡುವುದಾಗಿ ಶಾಸಕ ಕೆ.ಎನ್.ರಾಜಣ್ಣ ಭರವಸೆ ನೀಡಿದರು. ಇಲ್ಲಿನ ಎಸಿ ಕಚೇರಿ ಸಭಾಂಗಣದಲ್ಲಿ ಈಚೆಗೆ ತಾಲೂಕಿನಲ್ಲಿರುವ ವಸತಿ ಮತ್ತು ನಿವೇಶನ ರಹಿತ ಫಲಾನುಭವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ವಸತಿ ಮತ್ತು ನಿವೇಶನ ರಹಿತ ಅರ್ಹ ಬಡ ಫಲಾನುಭವಿಗಳಿಗೆ ಮನೆ ಕಟ್ಟಿ ಕೊಡುವುದು ನಮ್ಮ ಮೊದಲ ಆದ್ಯತೆ, ಹಾಗಾಗಿ ತಾಲೂಕು ಮಟ್ಟದ ಅಧಿಕಾರಿಗಳು ಬಡ ಜನರ ಪರವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಸರ್ಕಾರಗಳಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಬಡವರಿಗೆ ಮುಟ್ಟಿಸುವ ಜವಾಬ್ದಾರಿ ಅಧಿಕಾರಿಗಳ ಕರ್ತವ್ಯ ಎಂದರು.
ವಸತಿ, ನಿವೇಶನ ಹಂಚಿಕೆ ಸಂಬಂಧಿಸಿದ ಕಾಮಗಾರಿಗಳು ಪ್ರಸ್ತುತ ಅವುಗಳ ಸ್ಥಿತಿ ಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ವಸತಿ ರಹಿತರಿಗೆ ಶೀಘ್ರವಾಗಿ ಮನೆ, ಇತರೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನಾದ್ಯಂತ ಪ್ರಗತಿಯಲ್ಲಿರುವ ಕಾಮಗಾರಿಗಳು ಮತ್ತು ಅರ್ಜಿ ವಿಲೇವಾರಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರವಾಗಿ ಮಾಹಿತಿ ಪಡೆದು ತುರ್ತಾಗಿ ಕಾಮಗಾರಿ, ಅರ್ಜಿ ವಿಲೇವಾರಿ ಮಾಡುವಂತೆ ರಾಜಣ್ಣ ಸೂಚಿಸಿದರು.
ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಹಳೇ ಭೂ ದಾಖಲಾತಿಗಳ ಗಣಕೀಕರಣದಿಂದ ದಾಖಲೆ ಸುರಕ್ಷತೆ ಮತ್ತು ಸುಲಭವಾಗಿ ದೊರಕಲು ಗ್ಯಾರಂಟಿ ಕಚೇರಿ ನೂತನ ಕೊಠಡಿಯನ್ನು ಇದೇ ಸಂದರ್ಭದಲ್ಲಿ ಜನಾರ್ಪಣೆಗೊಳಿಸಲಾಯಿತು. ಸಭೆಯಲ್ಲಿ ಎಸಿ ಗೋಟೂರು ಶಿವಪ್ಪ,ತಹಸೀಲ್ದಾರ್ ನಂದಿನಿ,ಇಒ ಉತ್ತಮ್, ಎಡಿ ಧನಂಜಯ್, ಸೇರಿದಂತೆ ಅನೇಕರಿದ್ದರು.