ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡು ಸದಾಶಿವ ರಾವ್‌ ಅವರ ಜೀವನ ಇತರರಿಗೆ ಆದರ್ಶ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಮೂಲ್ಕಿ: ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡು ಸದಾಶಿವ ರಾವ್‌ ಅವರ ಜೀವನ ಇತರರಿಗೆ ಆದರ್ಶ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.ಮೂಲ್ಕಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೂಲ್ಕಿಯ ಕಾರ್ನಾಡಿನ ಗಾಂಧಿ ಮ್ಯೆದಾನದಲ್ಲಿ ನಡೆದ ಮೂಲ್ಕಿ ತಾಲೂಕು ಮಟ್ಟದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧ್ವಜಾರೋಹಣ ಮಾಡಿದ ಮೂಲ್ಕಿ ತಾಲೂಕು ತಹಸೀಲ್ದಾರ್‌ ಪೃಥ್ವಿ ಸಾನಿಕಮ್ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕವಾಗಿ ನಮಗೆ ಸಿಕ್ಕಿದ ಸ್ವಾತಂತ್ರ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಮೂಲ್ಕಿ ಪೊಲೀಸ್‌ ಠಾಣೆ ಉಪ ನಿರೀಕ್ಷಕ ರಾಘವೇಂದ್ರ ನಾಯಕ್‌ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗೌರವಿಸಲಾಯಿತು. ಮೂಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಮಧುಕರ್‌, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಯಶಂಕರ್, ಮೂಲ್ಕಿ ನಗರಪಂಚಾಯಿತಿ ಮಾಜಿ ಅಧ್ಯಕ್ಷ ಸತೀಶ್ ಅಂಚನ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಶೆರ್ಲಿ ಸುಮಾಲಿನಿ, ಮೂಲ್ಕಿ ತಾಲೂಕಿನ ವಿವಿಧ ಪಂಚಾಯಿತಿ ಅಧಿಕಾರಿಗಳು ಇದ್ದರು. ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಸ್ವಾಗತಿಸಿದರು. ಪ್ರೇಮಾ ಶೆಟ್ಟಿ ನಿರೂಪಿಸಿದರು.