ಪೌಷ್ಟಿಕ ಆಹಾರ ವಿತರಣೆಗೆ ಶಾಸಕರಿಂದ ಚಾಲನೆ

| Published : Nov 06 2025, 02:15 AM IST

ಸಾರಾಂಶ

ಗಣಿಬಾಧಿತ ಪ್ರದೇಶಾಭಿವೃದ್ದಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುವ ಈ ಕಾರ್ಯಕ್ರಮವನ್ನು ರೂಪಿಸಿದ್ದು ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ನಿಮ್ಮ ಆರೊಗ್ಯವನ್ನು ಉತ್ತಮಪಡಿಸಿಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ

ಗಣಿಬಾಧಿತ ಪ್ರದೇಶಾಭಿವೃದ್ದಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುವ ಈ ಕಾರ್ಯಕ್ರಮವನ್ನು ರೂಪಿಸಿದ್ದು ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ನಿಮ್ಮ ಆರೊಗ್ಯವನ್ನು ಉತ್ತಮಪಡಿಸಿಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಮುಖ್ಯ. ಆರೋಗ್ಯ ಚೆನ್ನಾಗಿದ್ದರೆ ಮಕ್ಕಳು ಉತ್ತಮ ವಾಗಿ ಶಿಕ್ಷಣ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ದೂರ ಮಾಡುವ ದೃಷ್ಠಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಪ್ರತಿದಿನ ವಿವಿಧ ಕಾಳುಗಳನ್ನು ನೀಡುವುದು. ಶನಿವಾರ ಹಣ್ಣನ್ನು ನೀಡುವುದು ಈ ಕಾರ್ಯಕ್ರಮದಲ್ಲಿದೆ. ಇದನ್ನುಮಕ್ಕಳು ಸದ್ಬಳಕೆ ಮಾಡಿಕೊಳ್ಳಿ ಎಂದರು. ಒಂದು ಕೋಟಿ ಅನುದಾನ ನೀಡಿದ್ದು ಅಗತ್ಯವಿರುವಂತಹ ಕೊಠಡಿಗಳ ನಿರ್ಮಿಸಲಾಗುವುದು. ಶಿಕ್ಷಣದಿಂದ ಯಾರು ವಂಚಿತರಾಗಬಾರದು ಎಂದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸಮೂರ್ತಿ ಮಾತನಾಡಿ, ಮಕ್ಕಳಿಗೆ ಸರ್ಕಾರ ಈ ಪೌಷ್ಟಿಕ ಆಹಾರ ನೀಡುವ ಯೋಜನೆ ರೂಪಿಸಿರುವುದು ಒಳ್ಳೆಯ ವಿಚಾರವಾಗಿದ್ದು, ಇದರಿಂದ ಮಕ್ಕಳಲ್ಲಿನ ಆಹಾರದ ಕೊರತೆಯಿಂದಾಗುವ ಕೆಟ್ಟ ಪರಿಣಾಮಗಳನ್ನು ದೂರ ಮಾಡಬಹುದು ಎಂದ ಅವರು ಇದನ್ನು ಮಕ್ಕಳು ಬಳಸಿಕೊಂಡು ತಮ್ಮ ಆರೋಗ್ಯವನ್ನು ನೋಡಿಕೊಳ್ಳಬೇಕು ಎಂದರು. ಅಧಿಕಾರಿ ಗವಿರಂಗಯ್ಯ ಮಾತನಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರಂದರ ಕೆ, ಇಒ ದೊಡ್ಡಸಿದ್ದಯ್ಯ, ಬಿಇಒ ಕಾಂತರಾಜು, ಮಾಜಿ ಪುರಸಭಾದ್ಯಕ್ಷ ಸಿ.,ಎಂ.ರಂಗಸ್ವಾಮಿ, ಎಸ್‌ಡಿಎಂಸಿ ಉಪಾದ್ಯಕ್ಷೆ ನೇತ್ರಾವತಿ, ಮುಖ್ಯೋಪಾದ್ಯಯಿನಿ ಕವಿತಾ, ನಿವೃತ್ತ ತಹಸೀಲ್ದಾರ್ ಲಕ್ಷ್ಮಣಪ್ಪ ಸೇರಿದಂತೆ ಇತರರು ಇದ್ದರು.