ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಮಧು ಜಿ.ಮಾದೇಗೌಡ

| Published : Sep 21 2024, 01:55 AM IST

ಸಾರಾಂಶ

ಮಣಿಗೆರೆ ಗ್ರಾಮದಲ್ಲಿ ಕಾರು-ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ವಿಚಾರಿಸಿದರು.

ಕನ್ನಡಪ್ರಭ ವಾರ್ತೆ ಭಾರತೀನಗರ

ಮಣಿಗೆರೆ ಗ್ರಾಮದಲ್ಲಿ ಕಾರು-ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ವಿಚಾರಿಸಿದರು.

ನಂತರ ಗಾಯಾಳುಗಳು, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಶಾಸಕರು, ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ನುರಿತ ವೈದ್ಯರ ಮೇಲ್ವಿಚಾರಣೆಯಲ್ಲಿ ಎಲ್ಲರಿಗೂ ಆದ್ಯತೆ ಮೇಲೆ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಈ ವೇಳೆ ಮದ್ದೂರು ತಾಪಂ ಮಾಜಿ ಸದಸ್ಯರಾದ ಭರತೇಶ್, ಬಿ.ಗಿರೀಶ್, ಮುಖಂಡರಾದ ಅಪ್ಪಾಜಿ ಮುಡೀನಹಳ್ಳಿ, ಅಣ್ಣೂರು ಸಿದ್ದಪ್ಪ ಇತರರು ಇದ್ದರು.ಮಾಜಿ ಶಾಸಕ ಕೆ.ಸುರೇಶ್‌ಗೌಡಗೆ ನೋಟಿಸ್ ನೀಡಲು ತಯಾರಿ?

ಕನ್ನಡಪ್ರಭ ವಾರ್ತೆ ಮಂಡ್ಯನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದಾಯ್ತು. ಈಗ ಜೆಡಿಎಸ್ ಮಾಜಿ ಶಾಸಕ ಕೆ.ಸುರೇಶ್‌ಗೌಡರಿಗೂ ನೋಟಿಸ್‌ ಜಾರಿಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ನಾಗಮಂಗಲದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ. ಅವರನ್ನು ಕಣ್ಣಾರೆ ಕಂಡಿದ್ದೇನೆ. ಗಲಭೆಯಲ್ಲಿ ಅವರ ಕೈವಾಡವು ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರನ್ನಲಾಗಿದೆ. ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ವಿವರಣೆ ಕೇಳುವಂತೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಪೊಲೀಸರಿಗೆ ಸೂಚಿಸಿರುವುದಾಗಿ ತಿಳಿದುಬಂದಿದ್ದು, ಪಟ್ಟಣ ಪೊಲೀಸರಿಂದಲೇ ನೋಟಿಸ್ ಕೊಡಲು ಸಿದ್ಧತೆ ನಡೆಯುತ್ತಿರುವುದಾಗಿ ಗೊತ್ತಾಗಿದೆ.ಈ ವಿಷಯವಾಗಿ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಕೆ.ಸುರೇಶ್‌ಗೌಡ, ನನಗೆ ನೋಟಿಸ್ ಕೊಡಿಸಲು ಚಲುವರಾಯಸ್ವಾಮಿ ಯಾರು?, ಪೊಲೀಸರು ಬಂದು ನೋಟಿಸ್ ಕೊಟ್ಟರೇ ವಿವರಣೆ ಕೊಡೋಕೆ ಸಿದ್ಧನಿದ್ದೇನೆ ಎಂದು ಸವಾಲು ಹಾಕಿದರು.