- ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ನಿರ್ದೇಶನ
---ಕನ್ನಡಪ್ರಭ ವಾರ್ತೆ ಹನೂರು
ಶಾಸಕ ಎಂ.ಆರ್. ಮಂಜುನಾಥ್ ಅವರು ತಾಲೂಕಿನಲ್ಲಿರುವ ಗ್ರಾಮ ಪಂಚಾಯ್ತಿಗಳ ಅಧಿಕಾರಿಗಳ ಸಭೆ ಕರೆದು ನೀರಿನ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕೆಂದು ಸೂಚಿಸಿದರು.ಹನೂರು ಸರ್ಕಾರಿ ಆಸ್ಪತ್ರೆ ನಿರ್ಮಾಣ ಪರಿಶೀಲಿಸಿದ ನಂತರ ಮಾತನಾಡಿ, ಮಳೆಯ ಕೊರತೆಯ ನಡುವೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿರುವುದರಿಂದ ಮಾರ್ಟಳ್ಳಿ, ಕೊರಟ್ಟಿ ಹೂಸೂರು, ಶೆಟ್ಟಳ್ಳಿ, ರಾಮಪುರ, ಬೈಲೂರು, ಹುತ್ತೂರು, ಪಿ ಜಿ ಪಾಳ್ಯ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಭೂಗರ್ಭಶಾಸ್ತ್ರಜ್ಞರು ನೀರಿನ ಪರಿಶೀಲಿಸಿ ಕೊಳವೆಬಾವಿಗಳನ್ನು ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಭೆ ಕರೆಯಲಾಗಿತ್ತು. ಹೀಗಾಗಿ ಏಪ್ರಿಲ್ ಮೇನಲ್ಲಿ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಕ್ಕೆ ವರದಿ:
ತಾಲೂಕಿನಲ್ಲಿರುವ ಕುಡಿಯುವ ನೀರಿನ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿವಿಧ ಸಚಿವರ ಗಮನ ಸೆಳೆದು ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2022ರಿಂದಲೂ ಜಲಜೀವನ್ ಮಿಷನ್ ಕೇಂದ್ರ ಸರ್ಕಾರದ ಕುಡಿಯುವ ನೀರಿನ ಪೈಪ್‌ಲೈನ್‌ಗಳು ನಡೆಯುತ್ತಿದೆ. ಅರಣ್ಯ ಇಲಾಖೆಯಿಂದ ತೊಡಕಾಗಿರುವ ಕಾರಣ ವರದಿ ನೀಡಲಾಗಿದೆ ಎಂದರು.
---25ಸಿಎಚ್ಎನ್11
ಹನೂರಿನಲ್ಲಿ ಶಾಸಕ ಮಂಜುನಾಥ್ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.