ಸಾರಾಂಶ
ಕನ್ನಡಪ್ರಭವಾರ್ತೆ ಹನೂರು
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಗ್ರಾಮಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದರು.ಹನೂರು ತಾಲೂಕಿನ ವಿವಿಧ ಗ್ರಾಮಗಳಿದ ಕೆಂಪಯ್ಯನ ಹಟ್ಟಿ, ಗುಂಡಾಪುರ, ದೊಡ್ಡಾಲತ್ತೂರು, ಮಲ್ಲಯ್ಯನಪುರ , ಪುದು ನಗರ ಕೆಂಚಯ್ಯನ ದೊಡ್ಡಿ ಗ್ರಾಮಗಳಲ್ಲಿ ಆಚರಣೆ ಮಾಡಲಾಗುತ್ತಿರುವ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭೇಟಿ ನೀಡಿದ ಶಾಸಕರು ಗ್ರಾಮಸ್ಥರಿಗೆ ಹಬ್ಬದ ಶುಭಾಶಯ ಕೋರಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು. ಕೃಷ್ಣ ಜನ್ಮಾಷ್ಟಮಿ ಆಚರಣೆ ಭಾರತ ಹಾಗೂ ವಿದೇಶಗಳಲ್ಲಿಯೂ ಆಚರಣೆ ಮಾಡಲಾಗುತ್ತದೆ . ಅದರಂತೆ ಹಿಂದೂ ಧರ್ಮದ ವಿಶೇಷ ಹಬ್ಬವಾದ ಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಹಬ್ಬವು ದೇಶಾದ್ಯಂತ ಸೋಮವಾರ ಆಚರಿಸಲಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಶ್ರದ್ಧೆ ಭಕ್ತಿಯಿಂದ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬರಿಗೂ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಳಿತಾಗಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯಾದವ ಜನಾಂಗದ ಮುಖಂಡರು ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು.ಸಂಭ್ರಮ ಸಡಗರ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗ್ರಾಮಗಳಲ್ಲಿ ಸಂಭ್ರಮ ಸಡಗರದಿಂದ ಕೃಷ್ಣನ ಮೂರ್ತಿಯನ್ನು ಇಟ್ಟು ವಿವಿಧ ಫಲ ಪುಷ್ಪಗಳ ಅಲಂಕಾರಗೊಳಿಸಿ ತಳಿರು ತೋರಣಗಳಿಂದ ಸಿಂಗರಿಸಿ ವಾದ್ಯ ಮೇಳಗಳ ಜೊತೆ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.