ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಮಂಜುನಾಥ್ ಭೇಟಿ

| Published : Apr 09 2025, 12:33 AM IST

ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಮಂಜುನಾಥ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು ಮಲೆಮಾದೇಶ್ವರ ಬೆಟ್ಟದ ಶೈಕ್ಷಣಿಕ ವಲಯದ ಕೀರನ ಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆಮಾದೇಶ್ವರ ಬೆಟ್ಟದ ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಹನೂರು ಶೈಕ್ಷಣಿಕ ವಲಯದ ಮಲೆಮಾದೇಶ್ವರ ಬೆಟ್ಟದ ಕ್ಲಸ್ಟರ್ ವ್ಯಾಪ್ತಿಯ ಗೊರಸಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಮಕ್ಕಳ ಬಗ್ಗೆ ಹಾಜರಾತಿ ಬಗ್ಗೆ ಮತ್ತು ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು. ಮಲೆಮಾದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದ ಅಂಚಿನಲ್ಲಿ ಬರುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಗೊರಸಾಣೆ ಶಾಲೆಯಲ್ಲಿ 7 ವಿದ್ಯಾರ್ಥಿಗಳು ವಿವಿಧ ಗ್ರಾಮಗಳಿಂದ ಈ ಶಾಲೆಗೆ ಬರುತ್ತಿದ್ದು ಶಾಲೆಗೆ ಬೇಕಾದ ಸುತ್ತು ಗೋಡೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಒತ್ತು ನೀಡಲಾಗುವುದು ಎಂದರು.

ಇಂಡಿಗನತ್ತ, ಕೀರನ ಹೊಲ, ಹಳೆಯೂರು ವಿವಿಧ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಿಗುವ ಅನುದಾನ ಕೊಡಿಸಲು ಶ್ರಮಿಸಲಾಗುವುದು ಎಂದರು.

ಕಾಡಂಚಿನ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು. ಶಾಲೆಯಲ್ಲಿ ಶಿಕ್ಷಕರಿಂದ ಮಕ್ಕಳ ಹಾಜರಾತಿ ಹಾಗೂ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮುಖಂಡರಾದ ಗಿರಿಯ ನಾಗ ಸಂತೋಷ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.