ಸಾರಾಂಶ
20 ದಿನಗಳ ಕಾಲ ನಡೆಯಲಿರುವ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡ ಜಾತ್ರೆಗೆ ಚಾಲನೆ ನೀಡಿದ ಮಂತರ್ ಗೌಡ ಮಾತನಾಡಿ, ಜಾತ್ರೆಗೆ ಆಗಮಿಸುವ ಜನರ, ಗ್ರಾಹಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಶ್ರೀ ಮಹಾಗಣಪತಿ ದೇವಸ್ಥಾನ ರಥೋತ್ಸವ ಅಂಗವಾಗಿ ಗುಂಡುರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಆಯೋಜಿಸಿರುವ ಅಮ್ಯೂಸ್ಮೆಂಟ್ ಪಾರ್ಕ್‌ಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.20 ದಿನಗಳ ಕಾಲ ನಡೆಯಲಿರುವ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡ ಜಾತ್ರೆಗೆ ಚಾಲನೆ ನೀಡಿದ ಮಂತರ್ ಗೌಡ ಮಾತನಾಡಿ, ಜಾತ್ರೆಗೆ ಆಗಮಿಸುವ ಜನರ, ಗ್ರಾಹಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ದೇವಾಲಯ ಸಮಿತಿ ಅಧ್ಯಕ್ಷ ಎಂ ಕೆ ದಿನೇಶ್ ಮಾತನಾಡಿ, ರಥೋತ್ಸವದಲ್ಲಿ ಅಂದಾಜು 15 ಸಾವಿರಕ್ಕಿಂತಲೂ ಅಧಿಕ ಭಕ್ತಾದಿಗಳು ಪಾಲ್ಗೊಂಡಿದ್ದರು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮುಂದಿನ ಒಂದು ವಾರ ತನಕ ದಿನನಿತ್ಯ ದೇವತಾ ಕಾರ್ಯಗಳು ನಡೆಯಲಿವೆ ಎಂದರು.ಜಾತ್ರಾ ಮಹೋತ್ಸವ ಸಾಂಸ್ಕೃತಿಕ ಸಮಿತಿಯ ಸಂಚಾಲಕ ವಿ ಪಿ ಶಶಿಧರ್ ಮಾತನಾಡಿ ಜಾತ್ರಾ ಮೈದಾನದಲ್ಲಿ ನ.19 ರಿಂದ ಡಿಸೆಂಬರ್ 9ರ ತನಕ ದಿನನಿತ್ಯ ಸಂಜೆ 7 ಗಂಟೆಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರ ನೀಡಿದರು.
ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯರಾದ ದಿನೇಶ್, ಜಯಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಪಿ ಚಂದ್ರಕಲಾ, ಗೆಳೆಯರ ಬಳಗದ ಅಧ್ಯಕ್ಷ ವಿ ಎಸ್ ಆನಂದ್ ಕುಮಾರ್, ವಿ ಎಸ್ ಎಸ್ ಎನ್ ಅಧ್ಯಕ್ಷ ಟಿ ಆರ್ ಶರವಣಕುಮಾರ್, ಪದಾಧಿಕಾರಿಗಳು ಸದಸ್ಯರು ಹಾಗೂ ದೇವಾಲಯ ಸಮಿತಿ ಗೆಳೆಯರ ಬಳಗದ ಪ್ರಮುಖರು ಇದ್ದರು.