ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಸ್ಥರಿಗೆ ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ಅನುಕೂಲವಾಗಲಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ

ಸೋಮವಾರಪೇಟೆ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಸ್ಥರಿಗೆ ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ಅನುಕೂಲವಾಗಲಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ.

ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನೇರಳೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಈರಪ್ಪ, ಪ್ರಮುಖರಾದ ಲೋಕೇಶ್, ಸತೀಶ್, ಎಸ್.ಎಂ.ಡಿಸಿಲ್ವಾ, ಮೇಘ ಇದ್ದರು. ಸೋಮವಾರಪೇಟೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದಿಂದ ೪೦ ಲಕ್ಷ ರು. ಅನುದಾನದೊಂದಿಗೆ ಈ ರಸ್ತೆ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ನೇರಳೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಈ ರಸ್ತೆ ಮಹತ್ವದ ಸಂಪರ್ಕವಾಗಿದ್ದು, ದೀರ್ಘಕಾಲದ ಬೇಡಿಕೆ ಇದಾಗಿದೆ.