ಶಿಗ್ಗಾಂವಿ ತಾಲೂಕಿನಲ್ಲಿ ಸುಮಾರು ೨೦ ಸಾವಿರ ಕುಟುಂಬದ ಸದಸ್ಯರಿಗೆ ಹಕ್ಕುಪತ್ರ ಕೊಡುವ ಸಂಕಲ್ಪವಿದೆ. ಇಲ್ಲಿಯವರೆಗೂ ೮೫೦೦ ಹಕ್ಕುಪತ್ರ ನೀಡಿದ್ದೇನೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.

ಶಿಗ್ಗಾಂವಿ: ತಾಲೂಕಿನಲ್ಲಿ ಸುಮಾರು ೨೦ ಸಾವಿರ ಕುಟುಂಬದ ಸದಸ್ಯರಿಗೆ ಹಕ್ಕುಪತ್ರ ಕೊಡುವ ಸಂಕಲ್ಪವಿದೆ. ಇಲ್ಲಿಯವರೆಗೂ ೮೫೦೦ ಹಕ್ಕುಪತ್ರ ನೀಡಿದ್ದೇನೆ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು. ತಾಲೂಕಿನ ಸುರಪಗಟ್ಟಿ ಕಂದಾಯ ಗ್ರಾಮ ಉಪ ಗ್ರಾಮದಲ್ಲಿನ ನಿವಾಸಿಗಳಿಗೆ ೧೧೧ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಹಕ್ಕುಪತ್ರ ನೀಡುವ ವಿಷಯವಾಗಿ ಹಣ ವಸೂಲಿ ಮಾಡುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಬಗ್ಗೆ ನನ್ನ ಗಮನಕ್ಕೆ ಬಂದರೆ ನಾನು ನಿದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ. ಮುಖ್ಯಮಂತ್ರಿ ವಿಶೇಷ ಅನುದಾನ ಅಡಿಯಲ್ಲಿ ೧೪೦೦ ಕೋಟಿ ಅನುದಾನ ಕ್ಷೇತ್ರಕ್ಕೆ ತಂದಿದ್ದೇನೆ. ಕುಡಿಯುವ ನೀರಿನ ಯೋಜನೆಗಾಗಿ ಒಟ್ಟು ೩೫೦ ಕೋಟಿ ಹಣ ಮಂಜೂರಾಗಿದ್ದು, ಅದರಲ್ಲಿ ಸತತವಾಗಿ ೨೪ ಗಂಟೆ ಶಾಶ್ವತವಾಗಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ೧೦೯ ಕೋಟಿ ಹಣ ಮೀಸಲಿಡಲಾಗಿದೆ. ೬ ಸಾವಿರ ಕಡು ಬಡವರಿಗೆ ವಸತಿ ವ್ಯವಸ್ಥೆ ಕಲ್ಪಿಸಿಕೊಡಲು ಯೋಜನೆ ರೂಪಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಚಂದ್ರು ಮಾಯಣ್ಣವರ, ಅಣ್ಣಪ್ಪ ಲಮಾಣಿ, ಮಲ್ಲಿಕಾರ್ಜುನಗೌಡ ಪಾಟೀಲ, ಮಲ್ಲಮ್ಮ ಸೋಮನಕಟ್ಟಿ, ಬಾಬರ ಬಾವೋಜಿ ಸೇರಿದಂತೆ ಫಲಾನುಭಾವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.