ತಾಲೂಕು ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹ 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಅವರು ಗುದ್ದಲಿಪೂಜೆ ನೆರವೇರಿಸಿದರು. ಪಟ್ಟಣದ ಜನತೆಗೆ ಉತ್ತಮ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಕ್ರೀಡಾಪಟುಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಮಂಜು ತಿಳಿಸಿದರು.

ಅರಕಲಗೂಡು: ಪಟ್ಟಣದ ತಾಲೂಕು ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹ 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಅವರು ಗುದ್ದಲಿಪೂಜೆ ನೆರವೇರಿಸಿದರು. ಪಟ್ಟಣದ ಜನತೆಗೆ ಉತ್ತಮ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಕ್ರೀಡಾಪಟುಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ₹1 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ಮತ್ತೊಂದು ₹1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಒಟ್ಟು 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎ. ಮಂಜು ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು, ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.