ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ದೇಗುಲಗಳಲ್ಲಿ ವಿಶೇಷ ಪೂಜೆ

| Published : Apr 14 2025, 01:18 AM IST

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ದೇಗುಲಗಳಲ್ಲಿ ವಿಶೇಷ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಬೇಕೆಂಬ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹಾರ ತುರಾಯಿಗಳಿಗೆ ತರುವ ಬದಲು ಮಕ್ಕಳಿಗೆ ನೋಟ್‌ಬುಕ್ ಕೊಡಿಸಿ ಎನ್ನುವ ಶಾಸಕರ ಮಾತಿಗೆ ಮನ್ನಣೆ ನೀಡಿದ್ದೇವೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ 63ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ವಿವಿಧ ದೇಗುಲಗಳಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಶುಭ ಹಾರೈಸಿದರು.

ಪಟ್ಟಣದ ಹೊರವಲಯದ ಮಾರೇಹಳ್ಳಿ ಲಕ್ಷ್ಮಿನರಸಿಂಹಸ್ವಾಮಿ, ಗಂಗಾಧಾರೇಶ್ವರಸ್ವಾಮಿ ಹಾಗೂ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ನಾಯಕನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು.

ಪಟ್ಟಣದ ಪ್ರವಾಸಿ ಮಂದಿರ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬ್ಲಾಕ್ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬ ಸಮೇತ ದೇವಸ್ಥಾನಗಳಿಗೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಮಾರೇಹಳ್ಳಿ ದೇವಸ್ಥಾನದ ಮುಂಭಾಗ ಮಂಡ್ಯ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಂದಿದ್ದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ನೂರಾರು ಮಂದಿ ಆಗಮಿಸಿ ಶುಭಾಶಯ ಕೋರಿದರು. ಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕುಟುಂಬ ಸದಸ್ಯರೊಂದಿಗೆ ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ 101 ತೆಂಗಿನ ಕಾಯಿ ಹೊಡೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತ ಪೇಟೆಬೀದಿ ರವಿ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಕಾರ್ಯಕರ್ತರಿಂದ ಪಾನಕ ಮಜ್ಜಿಗೆ ವಿತರಿಸಲಾಯಿತು.

ಹಾರ ತುರಾಯಿ, ಪೇಟ, ಶಾಲುಗಳನ್ನು ತರಬಾರದೆಂದು ನೀಡಿದ ಮನವಿಗೆ ಸ್ಪಂದಿಸಿದ ಕಾರ್ಯಕರ್ತರು ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು.

ಮತ್ತೊಂದಡೆ ಕಾಂಗೆಸ್ ಕಾರ್ಯಕರ್ತರು ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಅಭಿನಂದನೆ ಸಲ್ಲಿಸಿ ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಬೇಕೆಂಬ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹಾರ ತುರಾಯಿಗಳಿಗೆ ತರುವ ಬದಲು ಮಕ್ಕಳಿಗೆ ನೋಟ್‌ಬುಕ್ ಕೊಡಿಸಿ ಎನ್ನುವ ಶಾಸಕರ ಮಾತಿಗೆ ಮನ್ನಣೆ ನೀಡಿದ್ದೇವೆ ಎಂದರು.

ಶಾಸಕರಿಗೆ ಅಭಿನಂದನೆ ಸಲ್ಲಿಸಲು ಬಂದವರು ನೋಟ್ ಬುಕ್ ಜೊತೆಯಲ್ಲಿ ಬರುವುದು ಸಾಮಾನ್ಯವಾಗಿದ್ದು, ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗುತ್ತಿದೆ ಎಂದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಈಗಾಗಲೇ ಸಾವಿರಾರು ಕೋಟಿ ರು. ಅನುದಾನವನ್ನು ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತಿದ್ದಾರೆ. 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ನಾಯಕರಿಗೆ ಮುಂದಿನ ದಿನಗಳಲ್ಲಿ ದೊಡ್ಡ ಅಧಿಕಾರ ದೊರೆಯಲಿ ಎಂದು ಆಶೀಸಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ, ಮಹಿಳಾ ಘಟಕದ ಜಿಲ್ಲಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಸುಜಾತಾ ಕೆ.ಎಂ.ಪುಟ್ಟು, ಸುಷ್ಮಾ ರಾಜು, ಯುವ ಘಟಕದ ಅಧ್ಯಕ್ಷ ಶ್ರೀಕಾಂತ್ ಇದ್ದರು.

ಮುಖಂಡರಾದ ಬಿ.ಆರ್.ರಾಮಚಂದ್ರು, ಮುಟ್ಟನಹಳ್ಳಿ ಅಂಬರೀಶ್, ಬಿ.ಪುಟ್ಟಬಸವಯ್ಯ, ಎಚ್.ಬಿ.ಬಸವೇಶ್, ಸವಿತಾ, ಸಿ.ಮಾಧು, ಪ್ರಭುಲಿಂಗು, ಪುಟ್ಟಸ್ವಾಮಿ, ಕೃಷ್ಣೇಗೌಡ, ಎಚ್.ಕೆ.ಕೃಷ್ಣಮೂರ್ತಿ, ಪ್ರಮೀಳಾ, ಎಂ.ಎನ್.ಶಿವಸ್ವಾಮಿ, ಸಿ.ಎಂ.ವೇದಮೂರ್ತಿ, ಕುಳ್ಳಚನ್ನಂಕಯ್ಯ, ಶಿವಮಾದೇಗೌಡ, ರೋಹಿತ್ ಗೌಡ(ದೀಪು), ನಂಜುಂಡಸ್ವಾಮಿ, ದಿಲೀಪ್ ಕುಮಾರ್(ವಿಶ್ವ), ಬಂಕ್ ಮಹದೇವು, ಬಸವರಾಜು, ಗೋಪಾಲ್, ಚೇತನ್ ನಾಯಕ್, ಶಾಂತರಾಜು, ಸಾಹಳ್ಳಿ ಶಶಿ, ಕೆ.ಎಂ.ಬಾಲು, ಕೃಷ್ಣ, ಡಿ.ಎಂ.ಸುಂದರ್, ಸಂತೋಷ್ ಕುಮಾರ್ ಭಾಗವಹಿಸಿದ್ದರು.