ಸಾರಾಂಶ
ವಿರಾಜಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡು ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ವಿರಾಜಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡು ಸಂಭ್ರಮಿಸಿದರು.ಪೂರ್ವನಿಗದಿತ ಕಾರ್ಯಕ್ರಮದೆಡೆಗೆ ತೆರಳುವ ಸಂದರ್ಭದಲ್ಲಿ ಈ ಶಾಲೆಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು ಕೋರುತ್ತಾ ಸಿಹಿ ಹಂಚಿ ಸಂತಸ ಹಂಚಿಕೊಂಡರು. ಇದೇ ಸಂದರ್ಭ ಪಂಡಿತ್ ಜವಾಹರ್‌ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡುತ್ತಾ, ಮಕ್ಕಳಿಗೆ ದೊರಕುತ್ತಿರುವ ಎಲ್ಲ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಕ್ಕಳಿಗೆ ಮತ್ತೊಮ್ಮೆ ಶುಭಾಶಯಗಳು ಕೋರುತ್ತಾ ಪೂರ್ವ ನಿಗದಿತ ಕಾರ್ಯಕ್ರಮದತ್ತ ತೆರಳಿದರು.ಈ ಸಂದರ್ಭ ಪ್ರಮುಖರಾದ ಪಟ್ಟಡ ರಂಜಿ ಪೂಣಚ್ಚ, ಹನೀಫ್, ರಫೀಕ್, ಜೋಕಿಂ, ಸೂರಜ್ ಹೊಸೂರು, ಮಂಜುನಾಥ್, ನರೇಂದ್ರ ಕಾಮತ್, ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕಡಗದಾಳು ಸರ್ಕಾರಿ ಪ್ರೌಢಶಾಲೆ ಡಿಡಿಪಿಐ ಭೇಟಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ಶುಕ್ರವಾರ ಕಡಗದಾಳು ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಶಿಕ್ಷಕರ ಮತ್ತು ಪೋಷಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಗಮನಹರಿಸಬೇಕು. ಸರ್ಕಾರ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಆ ನಿಟ್ಟಿನಲ್ಲಿ ಶಿಕ್ಷಕರು ಸಹ ಶಿಕ್ಷಕರು ಒತ್ತು ನೀಡಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂದಾಗಬೇಕು ಎಂದರು.;Resize=(128,128))
;Resize=(128,128))
;Resize=(128,128))