ಶ್ರೀಮಂಗಲ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಸೋಮವಾರ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದರು. ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯ ಮಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದ್ದು, ಕೇಂದ್ರಕ್ಕೆ ತೆರಳಿದ ಶಾಸಕರು ಅಲ್ಲಿಯ ಜನರ ಕ್ಷೇಮವನ್ನು ವಿಚಾರಿಸುತ್ತ ಅವರ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸದ್ಯದಲ್ಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭದಲ್ಲಿ ನಿವಾಸಿಗಳಿಗೆ ಶಾಸಕರು ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಅಧ್ಯಕ್ಷರಾದ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ಪಕ್ಷದ ಪ್ರಮುಖರು, ತಹಸೀಲ್ದಾರ್ ಮೋಹನ್ ಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.ಕಾಳಜಿ ಕೇಂದ್ರಕ್ಕೆ ಶಾಸಕ ಪೊನ್ನಣ್ಣ ಭೇಟಿ
ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.