ಕ್ರೀಡಾಪ್ರತಿಭೆಗಳಿಗೆ ಶಾಸಕ ಪೂಂಜ ಸಮವಸ್ತ್ರ ಕೊಡುಗೆ

| Published : Nov 12 2025, 03:00 AM IST

ಕ್ರೀಡಾಪ್ರತಿಭೆಗಳಿಗೆ ಶಾಸಕ ಪೂಂಜ ಸಮವಸ್ತ್ರ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾ, ಕ್ರೀಡಾ ಸಮವಸ್ತ್ರವನ್ನು ಒದಗಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾ, ಕ್ರೀಡಾ ಸಮವಸ್ತ್ರವನ್ನು ಒದಗಿಸಿದರು.ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಶಾಸಕರು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಸುಮಾರು 70,000 ರು. ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.