ಸಾರಾಂಶ
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಜಯಗಳಿಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿರುವ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಪತ್ರ ನಕಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರೇ ಸ್ಪಷ್ಟಪಡಿಸಿದ್ದಾರೆ.
ಸುಧಾಕರ್ ಗೆದ್ದರೆ ರಾಜೀನಾಮೆ ನೀಡುವೆ ಎಂದಿದ್ದ ಪ್ರದೀಪ್ ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಜಯಗಳಿಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿರುವ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಪತ್ರ ನಕಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರೇ ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲೂ ಡಾ.ಸುಧಾಕರ್ ಗೆಲ್ಲಲ್ಲ. ಒಂದು ವೇಳೆ ಡಾ.ಸುಧಾಕರ್ ಕಾಂಗ್ರೆಸ್ಗಿಂತ ಒಂದೇ ಒಂದು ಹೆಚ್ಚು ಮತ ಪಡೆದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಸವಾಲು ಹಾಕಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರಪ್ಪ ಯಾವಾಗ ರಾಜೀನಾಮೆ ನೀಡ್ತಾರೆ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಕಿಡಿಗೇಡಿಗಳು ಸೃಷ್ಟಿಸಿರುವ ನಕಲಿ ರಾಜೀನಾಮೆ ಪತ್ರ ವೈರಲ್ ಆಗಿದೆ.