ಸುನೀಲ್‌ ಬೋಸ್‌ ಪರ ಶಾಸಕ ಪುಟ್ಟರಂಗಶೆಟ್ಟಿ ಮತಯಾಚನೆ

| Published : Apr 09 2024, 12:45 AM IST

ಸಾರಾಂಶ

ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ತಾಲೂಕಿನ ಬಿಸಲವಾಡಿ, ಹೊನ್ನಹಳ್ಳಿ ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ಚಾಮರಾಜನಗರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ತಾಲೂಕಿನ ಬಿಸಲವಾಡಿ, ಹೊನ್ನಹಳ್ಳಿ ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ಚಾಮರಾಜನಗರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತಯಾಚನೆ ಮಾಡಿದರು.ಮೊದಲಿಗೆ ಮಾಜಿ ಶಾಸಕ ದಿ.ಬಿ.ಎಸ್.ಪುಟ್ಟಸ್ವಾಮಿ ಸಮಾಧಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪುಷ್ಪಾರ್ಚನೆ ಮಾಡಿ, ಮತಯಾಚನೆಗೆ ಚಾಲನೆ ನೀಡಿದರು.

ಗ್ರಾಮಗಳ ಪ್ರತಿ ಮನೆಗೂ ಭೇಟಿನೀಡಿ, ಮತಯಾಚಿಸಿದ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಜೆಪಿ ಸರ್ಕಾರದ ಸುಳ್ಳುಭರವಸೆಗಳಿಗೆ ಮತದಾರರು ಮರುಳಾಗದೇ, ೫ ಗ್ಯಾರಂಟಿ ಅನುಷ್ಠಾನ ಮಾಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಗೆ ಮತನೀಡುವ ಮೂಲಕ ಸಿದ್ದರಾಮಯ್ಯ ಅವರ ಕೈಬಲಪಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರದಾನ ಕಾರ್ಯದರ್ಶಿ ಚಿಕ್ಕಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಗ್ರಾಪಂ ಅಧ್ಯಕ್ಷೆ ರಮ್ಯನಾಗರಾಜು, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ (ಸೋಮೇಶ್), ಸದಸ್ಯ ಎ.ಎಸ್.ಪ್ರದೀಪ್, ಮುಖಂಡ ಮಹದೇವಪ್ಪ, ಬಿಸಲವಾಡಿ ರವಿ, ಪಿಎಸಿಸಿ ಅಧ್ಯಕ್ಷ ಮಹದೇವಯ್ಯ, ಉಪಾಧ್ಯಕ್ಷ ಸಿದ್ದಶೆಟ್ಟಿ, ಎಪಿಎಂಸಿ ಮಾಜಿಉಪಾಧ್ಯಕ್ಷ ಸದಸ್ಯ ಪುರುಷೋತ್ತಮ್, ಗೀತಾಚನ್ನಬಸಪ್ಪ, ಶಂಭಪ್ಪ, ರಾಜೇಂದ್ರ, ಎಸ್ಸಿಮೋರ್ಚಾ ತಾಲೂಕು ಅಧ್ಯಕ್ಷ ಸೋಮಣ್ಣ, ಜಿಪಂ ಮಾಜಿಸದಸ್ಯ ರಮೇಶ್, ತಾಪಂ ಮಾಜಿ ಸದಸ್ಯ ಎಚ್.ಎಂ.ಮಹದೇವಶೆಟ್ಟಿ, ಬ್ಯಾಡಮೂಡ್ಲು ನಾಗರಾಜು, ಗ್ರಾಪಂ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.