- ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಸುತ್ತುಗೋಡೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಚಾಮರಾಜನಗರ - ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಆವರಣದಲ್ಲಿ 14 ಲಕ್ಷ ರು. ವೆಚ್ಚದಲ್ಲಿ ಸುತ್ತುಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ಪೂಜೆ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಅವರು, ನಗರಾಭಿವೃದ್ದಿ ಪ್ರಾಧಿಕಾರ ಕಚೇರಿಯ ಆವರಣಕ್ಕೆ ಸುತ್ತುಗೋಡೆ ಅವಶ್ಯಕವಿದ್ದು, ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಚಾಮರಾಜನಗರ - ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಡ್ರೋನ್ ಸರ್ವೆ ಕಾರ್ಯವನ್ನು ಶಾಸಕರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಚುಡಾ ಸದಸ್ಯರಾದ ರಾಜು, ಪುಟ್ಟಸ್ವಾಮಿ, ರಾಜೇಂದ್ರ (ದ್ವಾರ್ಕಿ), ಆಯುಕ್ತೆ ಸೀಮಾ, ಸಹಾಯಕ ನಿರ್ದೇಶಕ ರಿತೇಶ್, ಗುತ್ತಿಗೆದಾರ ಪ್ರಕಾಶ್, ಕಚೇರಿಯ ಸಿಬ್ಬಂದಿ ವರ್ಗ ಹಾಜರಿದ್ದರು.