ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ರಾಯರಡ್ಡಿ ಕೊಡುಗೆ ಅಪಾರ: ಬಸವರಾಜ ಉಳ್ಳಾಗಡ್ಡಿ

| Published : Jan 21 2025, 12:31 AM IST

ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ರಾಯರಡ್ಡಿ ಕೊಡುಗೆ ಅಪಾರ: ಬಸವರಾಜ ಉಳ್ಳಾಗಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತಂದಿದ್ದಾರೆ.

ವಿವೇಕ ಯೋಜನೆಯಡಿ ಸುಮಾರು ₹೧ ಕೋಟಿ ವೆಚ್ಚದಲ್ಲಿ 4 ನೂತನ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತಂದಿದ್ದಾರೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಜ್ಯ ಸರ್ಕಾರದ ವಿವೇಕ ಯೋಜನೆಯಡಿ ಸುಮಾರು ₹೧ ಕೋಟಿ ವೆಚ್ಚದಲ್ಲಿ ನಾಲ್ಕು ನೂತನ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ಎಂಜಿನಿಯರಿಂAಗ್ ಕಾಲೇಜು, ನವೋದಯ, ಕೌಶಲಾಭಿವೃದ್ಧಿ ಸೇರಿದಂತೆ ಶಾಲಾ-ಕಾಲೇಜು ನಿರ್ಮಾಣವಾಗಿವೆ. ಇದಕ್ಕೆ ರಾಯರಡ್ಡಿಯವರ ಪರಿಶ್ರಮ ಅಪಾರವಾಗಿದೆ ಎಂದರು.

ಇಡೀ ರಾಜ್ಯಕ್ಕೆ ಈ ತಾಲೂಕು ಮಾದರಿಯಾಗಿದೆ. ಇನ್ನೂ ಪಟ್ಟಣದಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜು ಕೂಡ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ. ಇದರಿಂದ ಈ ಭಾಗದ ಬಡಮಕ್ಕಳ ಶೈಕ್ಷಣಿಕ ಪ್ರಗತಿ ಹೊಂದಬೇಕೆನ್ನುವ ರಾಯರಡ್ಡಿಯವರ ಕನಸು ನನಸಾಗುತ್ತಿದೆ. ನೂತನ ಕಟ್ಟಡಗಳ ಕಾಮಗಾರಿ ಗುಣಮಟ್ಟದಿಂದ ಆಗಬೇಕು. ದೀರ್ಘಕಾಲವರೆಗೂ ಕಟ್ಟಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಬೇಕು. ಅಧಿಕಾರಿಗಳು ಯಾವುದೇ ಕಳೆಪೆ ಕಾಮಗಾರಿಗೆ ಅವಕಾಶ ನೀಡದಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಸಿದ್ದನಗೌಡ ಬನ್ನಪ್ಪಗೌಡ್ರ, ಕಾಲೇಜಿನ ಪ್ರಾಚಾರ್ಯ ಶರಣಪ್ಪ ಬೇಲೇರಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರಡ್ಡಿ, ಸುಧೀರ ಕೊರ್ಲಳ್ಳಿ, ಮಲ್ಲು ಜಕ್ಕಲಿ, ಚಂದ್ರಪ್ಪ ದೊಡ್ಮನಿ, ಗುತ್ತಿಗೆದಾರ ಬಸವರಾಜ ನಾಯಕ, ಹನುಮಂತಪ್ಪ ಭಜೇಂತ್ರಿ ಮತ್ತಿತರರು ಇದ್ದರು.