ಗ್ರಾಮ ಪಂಚಾಯ್ತಿ ನೌಕರರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ ಶಾಸಕ ರೇವಣ್ಣ

| Published : Oct 10 2024, 02:15 AM IST

ಸಾರಾಂಶ

ಗ್ರಾಮ ಪಂಚಾಯ್ತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಬೇಲೂರು ಶಾಸಕ ಎಚ್.ಕೆ. ಸುರೇಶ್ ಭೇಟಿ ನೀಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯ್ತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಬೇಲೂರು ಶಾಸಕ ಎಚ್.ಕೆ. ಸುರೇಶ್ ಭೇಟಿ ನೀಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ದಿನ ಹೋರಾಟವನ್ನು ಪ್ರಾರಂಭಿಸಿದ್ದು ಎಲ್ಲಾ ವೃಂದದ ಬೇಡಿಕೆಗಳು ಈಡೇರುವವರೆಗೆ ಈ ಹೋರಾಟ ಅನಿರ್ದಿಷ್ಟ ಅವಧಿವರೆಗೆ ಮುಂದುವರೆಯುವುದು ಎಂದರು.

ಇದೇ ವೇಳೆ ಸಂಘದ ರಾಜ್ಯ ಮಾಜಿ ಉಪಾಧ್ಯಕ್ಷ ನಟರಾಜು, ತಾಲೂಕು ಅಧ್ಯಕ್ಷ ನಂಜಪ್ಪ, ಸಿ.ಎಸ್. ಶಿವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.