ದೈಹಿಕ ಶಿಕ್ಷಕರ ನೇಮಕಾತಿಗೆ ಶಾಸಕರ ಒತ್ತಾಯ

| Published : Sep 26 2024, 10:34 AM IST

ಸಾರಾಂಶ

ಚನ್ನರಾಯಪಟ್ಟಣ: ರಾಜ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನೀಗಿಸಲು ಗಮನಹರಿಸಬೇಕು ಎಂದು ಶಾಸಕ ಬಾಲಕೃಷ್ಣ ಒತ್ತಾಯಿಸಿದರು.

ಚನ್ನರಾಯಪಟ್ಟಣ: ರಾಜ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನೀಗಿಸಲು ಗಮನಹರಿಸಬೇಕು ಎಂದು ಶಾಸಕ ಬಾಲಕೃಷ್ಣ ಒತ್ತಾಯಿಸಿದರು.

ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇದು ರಾಜ್ಯಮಟ್ಟದ ಸಮಸ್ಯೆಯಾಗಿದ್ದು ಇದಕ್ಕೆ ಆರ್ಥಿಕ ಮುಗ್ಗಟ್ಟು ಎದುರಾಗಬಾರದು. ಪ್ರತಿ ತಾಲೂಕಿನಲ್ಲಿ ಕನಿಷ್ಠ ೫೦ ಮಂದಿ ಕ್ರೀಡಾ ಶಿಕ್ಷಕರಿರಬೇಕು. ಅನುದಾನದ ಕೊರತೆಯ ನೆಪ ಹೇಳಿಕೊಂಡು ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಯುವಕರು ತಮ್ಮ ದೈಹಿಕ ಸಾಮರ್ಥ್ಯವನ್ನು ಸದೃಢವಾಗಿಸಿಕೊಳ್ಳಲು ಕ್ರೀಡೆಗಳು ಅತ್ಯವಶ್ಯ ಎಂದು ತಿಳಿಸಿದರು.

ತಾಲೂಕು ಮಟ್ಟದಲ್ಲಿ ನಾನಾ ಇಲಾಖೆಗಳ ನಡುವೆ ಸೌಹಾರ್ದಯುತ ಕ್ರೀಡಾಕೂಟವನ್ನು ಆಯೋಜಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ದೇಶದಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಅವರನ್ನ ಬೆಳೆಸಲು ಸ್ಟೇಜ್‌ ನೀಡಬೇಕು ಎಂದು ಹೇಳಿದರು.

ಟಿಎಪಿಸಿಎಂಎಸ್‌ನ ಉಪಾಧ್ಯಕ್ಷ ಕೃಷ್ಣೇಗೌಡ ಕ್ರೀಡಾ ಜ್ಯೋತಿಗೆ ಸ್ವಾಗತ ಕೋರಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್, ಬಿಒಎನ್ ದೀಪ, ಬಿಆರ್ ಸಿ ಕೆ ಆರ್ ಅನಿಲ್, ಕಾಳೇಗೌಡ, ಆನಂದ್, ರವಿಕುಮಾರ್ ಮತ್ತಿತರರು ಹಾಜರಿದ್ದರು.