ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದರು. ಈ ವೇಳೆ ರೈತರ ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭೂದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ತಾಲೂಕಿನಲ್ಲಿ ಜಮೀನುಗಳಿಗೆ ಹೋಗಲು ರೈತರಿಗೆ ತೊಂದರೆಯಾಗದಂತೆ ಜಮೀನಿನ ರಸ್ತೆ ಅಳತೆ ಮಾಡಿಕೊಡಬೇಕು. ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ರೈತರು ಹಲವಾರು ಬಾರಿ ನನ್ನ ಗಮನಕ್ಕೆ ತಂದಿದ್ದಾರೆ. ಯಾವುದೇ ಗ್ರಾಮದ ರೈತರು ರಸ್ತೆ ಸಮಸ್ಯೆ ಕುರಿತು ಬಂದರೆ ಕೂಡಲೆ ಸ್ಪಂದಿಸಿ ಅವರಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಇಂಡಿ:
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದರು. ಈ ವೇಳೆ ರೈತರ ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭೂದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ತಾಲೂಕಿನಲ್ಲಿ ಜಮೀನುಗಳಿಗೆ ಹೋಗಲು ರೈತರಿಗೆ ತೊಂದರೆಯಾಗದಂತೆ ಜಮೀನಿನ ರಸ್ತೆ ಅಳತೆ ಮಾಡಿಕೊಡಬೇಕು. ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ರೈತರು ಹಲವಾರು ಬಾರಿ ನನ್ನ ಗಮನಕ್ಕೆ ತಂದಿದ್ದಾರೆ. ಯಾವುದೇ ಗ್ರಾಮದ ರೈತರು ರಸ್ತೆ ಸಮಸ್ಯೆ ಕುರಿತು ಬಂದರೆ ಕೂಡಲೆ ಸ್ಪಂದಿಸಿ ಅವರಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ಸೂಚಿಸಿದರು.ಮಾಜಿ ದೇವದಾಸಿ ಮಹಿಳೆಯರು ಶಾಸಕರನ್ನು ಭೇಟಿಯಾಗಿ ಮಾಜಿ ದೇವದಾಸಿ ಮಹಿಳೆಯರಿಗೆ ಮನೆಗಳನ್ನು ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಶಾಸಕರು ಇದಕ್ಕೆ ಸ್ಪಂದಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಮಾಜಿ ದೇವದಾಸಿ ಮಹಿಳೆಯ ಸಮಸ್ಯೆ ಕೂಡಲೆ ಬಗೆಹರಿಸಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಶಾಸಕರಿಗೆ ನೀಡಿದರು.