ಜನರ ಸಮಸ್ಯೆ ಪರಿಹಾರಕ್ಕೆ ಶಾಸಕರ ಕಚೇರಿ

| Published : Nov 30 2024, 12:45 AM IST

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಜನತೆಯ ಆಶೀರ್ವಾದಿಂದ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗಿದ್ದು, ಶಾಸಕನಾದವನು ಸಾರ್ವಜನಿಕರಿಗೆ ಸಿಗಬೇಕು. ಈ ಹಿನ್ನೆಲೆಯಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಲು, ಅವರ ಅಹವಾಲುಗಳಿಗೆ ಸ್ಪಂದಿಸಲು ಶಾಸಕರ ಕಚೇರಿ ತೆರೆಯಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಗೆ ಪೂಜೆ ಸಲ್ಲಿಸಿ ಉದ್ಘಾಟಿಸಿದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಶಾಸಕರು ತಾಲೂಕಿನ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಇದನ್ನು ಅರಿತ ಜನ ಈ ಬಾರಿ ನನಗೆ ಅವಕಾಶ ನೀಡಿದ್ದಾರೆ. ಆ ಋಣವನ್ನು ತೀರಿಸಲು ಈ ಕಚೇರಿಗಳನ್ನು ತೆರೆಯಲಾಗಿದೆ. ಪಕ್ಷಾತೀತವಾಗಿ ಎಲ್ಲರಿಗೂ ಇಲ್ಲಿ ಬರಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.

ತಾಲೂಕಿನ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಶೇಷ ಅನುದಾನ ನೀಡಿದ್ದಾರೆ. ಅದನ್ನು ಸದ್ಬಳಸಿಕೊಂಡು ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬೋರ್‌ವೆಲ್ ರಂಗನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾ ಪ್ರಮೋದ್, ಸುನೀಲ್ ಇತರರಿದ್ದರು.

ಪೊಟೋ೨೯ಸಿಪಿಟಿ೨:

ಚನ್ನಪಟ್ಟಣ ತಾಪಂ ಕಚೇರಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಯೋಗೇಶ್ವರ್ ಪೂಜೆ ಸಲ್ಲಿಸಿದರು.

ಪೊಟೋ೨೯ಸಿಪಿಟಿ೩:

ಶಾಸಕರ ಕಚೇರಿಯಲ್ಲಿ ಕುಳಿತಿರುವ ಯೋಗೇಶ್ವರ್.