ಸಾರಾಂಶ
ಬೀದರ್‌ನಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಚುನಾವಣೆಯ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲೆಯಾದ್ಯಂತ ಎಲ್ಲಾ ಬೂತ್‌ಗಳಲ್ಲಿ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ (ಮತ್ತೊಮ್ಮೆ ಮೋದಿ ಸರ್ಕಾರ) ಎಂಬ ಘೋಷಣೆ ಯೊಂದಿಗೆ ಗೋಡೆ ಬರಹ ಕಾರ್ಯಕ್ರಮ ಪ್ರಾರಂಭವಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.ಕ್ಷೇತ್ರದ ಚಿಟ್ಟಾ ವಾಡಿ ಗ್ರಾಮದಲ್ಲಿರುವ ಶಾಸಕರ 61ನೇ ಬೂತ್ ಸಂಖ್ಯೆಯ ಬಡಾವಣೆಯಲ್ಲಿ ಮಂಗಳವಾರ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ ಮುಖಂಡರನ್ನು, ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವುದು ಮತ್ತು ಅದನ್ನು ಯಶಸ್ವಿಗೊಳಿಸುವುದು ನಮ್ಮ ಪ್ರಯತ್ನವಾಗಿದೆ.
ಈ ಘೋಷಣೆಯು 2024 ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ರಚಿಸಬೇಕು ಮತ್ತು ದೇಶದಲ್ಲಿ ಸ್ಥಿರವಾದ ಅಭಿವೃದ್ಧಿ ನಡೆಯಬೇಕು. ಪ್ರತಿ ಬೂತ್‌ನಲ್ಲಿ 5 ಕಡೆ ಗೋಡೆ ಬರಹಕ್ಕೆ ಚಾಲನೆ ಕೊಡಲಾಗುತ್ತದೆ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬುದು ದೇಶದ ಅಪೇಕ್ಷೆಯಾಗಿದೆ. ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಯವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದರು.2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಲೋಕಸಭಾ ಚುನಾವಣೆಯ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ. ಪ್ರತಿ ಬೂತ್‌ನಲ್ಲಿ 5 ಕಡೆ ಗೋಡೆ ಬರಹಕ್ಕೆ ಚಾಲನೆ ಕೊಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಬೀದರ್ ದಕ್ಷಿಣ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಗೌರಶೆಟ್ಟಿ, ಚಂದ್ರಯ್ಯ ಸ್ವಾಮಿ, ಮುಖಂಡರಾದ ಶಿವಾಜಿ ಪಾಟೀಲ್, ಜಗನ್ನಾಥ ಪಾಟೀಲ್, ನಗರ ಅಧ್ಯಕ್ಷ ಶಶಿಧರ ಹೊಸಳ್ಳಿ, ಉದಯಕುಮಾರ ತೋರಣ, ವಿಜಯಕುಮಾರ ಪಾಟೀಲ್, ಮಲ್ಲಿಕಾರ್ಜುನ್ ಚಿಟ್ಟಾ, ಗುರುನಾಥ ರಾಜಗಿರಾ, ಪ್ರಶಾಂತ ಸಿಂದೋಲ ಮತ್ತಿತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))