ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಶಾಸಕ ಎಸ್ಸೆಸ್

| Published : Jan 21 2024, 01:36 AM IST

ಸಾರಾಂಶ

ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ ಬಸವಣ್ಣನವರ ಅನುಭವ ಮಂಟಪ ಮಾದರಿ ಫಲಪುಷ್ಪ ಪ್ರದರ್ಶನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವೀಕ್ಷಿಸಿದರು.

ದಾವಣಗೆರೆ: ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ ಬಸವಣ್ಣನವರ ಅನುಭವ ಮಂಟಪ ಮಾದರಿ ಫಲಪುಷ್ಪ ಪ್ರದರ್ಶನವನ್ನು ದಕ್ಷಿಣ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಶನಿವಾರ ವೀಕ್ಷಿಸಿದ ಬಳಿಕ ಬಸವಣ್ಣನವರ ಅನುಭವ ಮಂಟಪ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಸಂತಸ ತಂದಿದೆ ಎಂದು ಹೇಳಿ ಸಚಿವರ, ಅಧಿಕಾರಿಗಳ ಶ್ಲಾಘಿಸಿದರು.

ಈ ವೇಳೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬೆಂಗಳೂರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಗುರುಸ್ವಾಮಿ, ಉದ್ಯಮಿ ಇಂದೂಧರ, ಶ್ಯಾಗಲೆ ಜಯಣ್ಣ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿದ್ದರು.

......

ಕ್ಯಾಪ್ಷನಃ20ಕೆಡಿವಿಜಿ41ಃ

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು.