ಸಾರಾಂಶ
ಕನ್ನಡಪ್ರಭ ವಾರ್ತೆ ಅರಸೀಕೆರೆ
ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಹಾಗೂ ವೀಕ್ಷಿಸುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಮನರಂಜನೆ ಮಾತ್ರ ದೊರೆಯುವುದಿಲ್ಲ. ಪರಸ್ಪರ ಪ್ರೀತಿ ವಿಶ್ವಾಸ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು.ತಾಲೂಕಿನ ಬಾಣಾವರ ಹೋಬಳಿಯ ಗಾಂಧಿನಗರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹಾಸನ ಜಿಲ್ಲೆಯ ಭೋವಿ ಸಮಾಜದ ವತಿಯಿಂದ ಪ್ರಭುಕುಮಾರ್ ಮೆಮೋರಿಯಲ್ ಕಪ್ 2025 ಭಾಗವಹಿಸಿ ಬ್ಯಾಟ್ ಬೀಸುವ ಮುಖಾಂತರ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡಿ ಪ್ರಭು ಅವರ ಅಂತ್ಯಕ್ರಿಯದಲ್ಲಿ ಭಾಗವಹಿಸುವುದಕ್ಕೆ ಆಗಿರಲಿಲ್ಲ ಈ ಸಂದರ್ಭದಲ್ಲಿ ನೆನಪಿಸಿಕೊಂಡು ಪ್ರಭು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡ ಅವರು, ಕ್ರೀಡೆ ಎಂಬುದು ಊರುಕೇರಿ ರಾಜ್ಯ,ರಾಷ್ಟ್ರ ಅಷ್ಟೇ ಅಲ್ಲದೆ ದೇಶ ವಿದೇಶಗಳ ನಡುವೆ ಬಾಂಧವ್ಯ ಬೆಸೆಯುವ ಕೊಂಡಿಯಂತಾಗಿದೆ. ಅಲ್ಲದೆ ವೈಯಕ್ತಿಕವಾಗಿಯೂ ಒತ್ತಡ ನಿವಾರಣೆ ಮಾಡಿಕೊಳ್ಳಲು ಕ್ರೀಡೆ ಎಂಬುದು ಒಂದು ಸಾಧನವಾಗಿದೆ ಎಂದು ಅಭಿಪ್ರಾಯಿಸಿದರು.
ಈ ರೀತಿಯ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ನನಗೂ ಹೆಚ್ಚಿನ ಒಲವಿದ್ದು, ಈ ರೀತಿಯ ಕಾರ್ಯಕ್ರಮಗಳಿಗೆ ನನ್ನ ಸಂಪೂರ್ಣ ಸಹಕಾರ ನಿಮಗೆ ನೀಡುವುದಾಗಿ ಭರವಸೆ ನೀಡಿದರು.ಮುಖಂಡರಾದ ಮರಟ್ಗೆರೆ ನಾಗರಾಜ್ ಮಾತನಾಡಿ, ರಾಜಕೀಯ ಕ್ಷೇತ್ರದ ಮೂಲಕ ಜನರ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಶಾಸಕ ಶಿವಲಿಂಗೇಗೌಡರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜತೆಗೆ ಈ ರೀತಿಯ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ, ಜಾನಪದ ಉತ್ಸವಗಳಿಗೆ, ಜನಪರ ಹೋರಾಟಗಳಿಗೆ, ಹೆಚ್ಚಿನ ನೆರವಾಗುವ ಸಹಕಾರ ನೀಡುತ್ತಾ ಬಂದಿರುವುದರಿಂದ ಸತತ ನಾಲ್ಕು ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗುವ ಮೂಲಕ ಯುವ ರಾಜಕಾರಣಿಗಳಿಗೆ ಆದರ್ಶ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಬೋವಿ ಸಮಾಜದ ಮುಖಂಡರುಗಳಾದ ಆನಂದ್. ಸೋಮಣ್ಣ. ಗಾಂಧಿನಗರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.