ರೈತರ ಜಮೀನುಗಳನ್ನು ಭೂಸ್ವಾಧೀನಪ್ರಕ್ರಿಯೆಯಿಂದ ಕೈಬಿಡುವಂತೆ ಶಾಸಕ ಶ್ರೀನಿವಾಸ್ ಆಗ್ರಹ

| Published : Oct 13 2025, 02:01 AM IST

ರೈತರ ಜಮೀನುಗಳನ್ನು ಭೂಸ್ವಾಧೀನಪ್ರಕ್ರಿಯೆಯಿಂದ ಕೈಬಿಡುವಂತೆ ಶಾಸಕ ಶ್ರೀನಿವಾಸ್ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಕೆಐಎಡಿಬಿ ಸಿಇಒ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರು ತಾತ್ಕಾಲಿಕವಾಗಿ ತಡೆಹಿಡಿಯುತ್ತೇವೆ. ಈ ಬಗ್ಗೆ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾನೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಿಎಂ, ಡಿಸಿಎಂ, ಸಚಿವರ ಬಳಿ ಚರ್ಚಿಸಿ ರೈತರ ಪರ ನಿಲ್ಲುತ್ತೇನೆ.
ದಾಬಸ್‍ಪೇಟೆ: ನಮ್ಮ ತಾಲೂಕಿನಲ್ಲಿ ಈಗಾಗಲೇ ಸಾವಿರಾರು ಎಕರೆ ರೈತರ ಭೂಮಿಯನ್ನು ಕೈಗಾರಿಕೆಗಳ ನಿರ್ಮಾಣಕ್ಕೆ ಸರ್ಕಾರ ಭೂಸ್ವಾಧೀನಪಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ನೆಲಮಂಗಲ ತಾಲೂಕನ್ನು ಭೂಸ್ವಾಧೀನ ಪ್ರಕ್ರಿಯೆಗಳಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರ ಬಳಿ ಮನವಿ ಮಾಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿಯ ಹಾದಿಹೊಸಹಳ್ಳಿ ರೈತರ ಜಮೀನುಗಳನ್ನು ಕೆಐಎಡಿಬಿ ಮಂಡಳಿ ಭೂಸ್ವಾಧೀನ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಕೆಐಎಡಿಬಿ ಸಿಇಒ ಅವರನ್ನು ರೈತರೊಂದಿಗೆ ಭೇಟಿ ಮಾಡಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂದು ಆಗ್ರಹಿಸಿ ಮಾತನಾಡಿದರು.

ಈಗಾಗಲೇ ಸೋಂಪುರ ಹಾಗೂ ತ್ಯಾಮಗೊಂಡ್ಲು ಹೋಬಳಿಗಳಲ್ಲಿ ಫಲವತ್ತಾದ ಕೃಷಿಭೂಮಿಗಳನ್ನು ಎಲ್ಲಾ ಸರ್ಕಾರಗಳು ಭೂಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳನ್ನು ನಿರ್ಮಿಸಿರುವ ಪರಿಣಾಮ ರೈತರಿಗೆ ವ್ಯವಸಾಯ ಮಾಡಲು ಭೂಮಿ ಇಲ್ಲದಂತಾಗಿದೆ. ಮುಂದೆಯೂ ಇದೇ ತರಹವಾದರೆ ರೈತರು ಜೀವನ ಮಾಡಲು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಹಾದಿಹೊಸಹಳ್ಳಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುಕ್ಕೆ ಸಂಬಂಧಪಟ್ಟಂತೆ ಭೂಸ್ವಾಧೀನ ಮಾಡಿಕೊಳ್ಳದೆ ಕೃಷಿ ಚಟುವಟಿಕೆಗಳಿಗೆ ಬಿಡಬೇಕು ಎಂದರು.

ಕೆಐಎಡಿಬಿ ಸಿಇಒ ಜೊತೆ ಚರ್ಚೆ:

ಕೆಐಎಡಿಬಿ ಸಿಇಒ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರು ತಾತ್ಕಾಲಿಕವಾಗಿ ತಡೆಹಿಡಿಯುತ್ತೇವೆ. ಈ ಬಗ್ಗೆ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾನೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಿಎಂ, ಡಿಸಿಎಂ, ಸಚಿವರ ಬಳಿ ಚರ್ಚಿಸಿ ರೈತರ ಪರ ನಿಲ್ಲುತ್ತೇನೆ ಎಂದರು.

ತ್ಯಾಮಗೊಂಡ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತೇಗೌಡ, ನೆಲಮಂಗಲ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್, ಹಾದಿಹೊಸಹಳ್ಳಿ ಗ್ರಾಮದ ರೈತರು ಉಪಸ್ಥಿತರಿದ್ದರು.