ಹೈಟೆಕ್ ಶೌಚಾಲಯ ಉದ್ಘಾಟಿಸಿದ ಶಾಸಕ ಶ್ರೀನಿವಾಸ

| Published : Sep 30 2024, 01:21 AM IST

ಸಾರಾಂಶ

ಬೃಹತ್ ಉದ್ದಿಮೆದಾರರು ತಮ್ಮ ಆದಾಯದ ಸ್ವಲ್ಪ ಭಾಗವನ್ನು ಕೆಲವು ಮೂಲಭೂತ ಸೌಕರ್ಯಗಳಿಲ್ಲದ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಂತಹ ಶಾಲೆಗಳಿಗೆ ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ ಪ್ರಶಂಸಿದರು.

ತರೀಕೆರೆ: ಬೃಹತ್ ಉದ್ದಿಮೆದಾರರು ತಮ್ಮ ಆದಾಯದ ಸ್ವಲ್ಪ ಭಾಗವನ್ನು ಕೆಲವು ಮೂಲಭೂತ ಸೌಕರ್ಯಗಳಿಲ್ಲದ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಂತಹ ಶಾಲೆಗಳಿಗೆ ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ ಪ್ರಶಂಸಿದರು.ಅವರು ಪಟ್ಟಣದ ಗಾಳಿಹಳ್ಳಿ ಕ್ರಾಸ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಟೀವಿ ನೆಟ್ವರ್ಕ್ ಅವರು ಸುಲಭ್ ಇಂಟರ್ನ್ಯಾಷನಲ್ ಸೋಸಿಯಲ್ ಸರ್ವೀಸ್ ಆರ್ಗನೇಜೇಷನ್ ಮೂಲಕ ನಿರ್ಮಿಸಿದ ಸುಮಾರು ₹10 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯವನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಈ ಶಾಲೆಯಲ್ಲಿ ಎಲ್.ಕೆ.ಜಿ. ಯಿಂದ ಏಳನೇ ತರಗತಿವರೆಗೆ ಸುಮಾರು ನೂರಕ್ಕೂ ಹೆಚ್ಚು ಮಕ್ಕಳಿದ್ದು, ಕೇವಲ 5 ಕೊಠಡಿಗಳಿವೆ. ಈ ಶಾಲೆ ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನ ನೋಡಿಕೊಂಡು ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಿಕೊಡಲಾಗವುದು ಎಂದು ತಿಳಿಸಿದರು.