ಬಡಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಶಾಸಕ ಸುನಿಲ್‌

| Published : Oct 20 2025, 01:04 AM IST

ಬಡಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಶಾಸಕ ಸುನಿಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಸೇವಾ ಕಾರ್ಯದ ಭಾಗವಾಗಿ, ಹೆಬ್ರಿ ಗ್ರಾಮದ ಬಡ ಮಹಿಳೆ ಚುಕ್ರಿ ಕೊರಗ ಅವರಿಗೆ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮವು ಭಾನುವಾರ ನಡೆಯಿತು.

ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ಸೇವಾ ಕಾರ್ಯದ ಭಾಗವಾಗಿ, ಹೆಬ್ರಿ ಗ್ರಾಮದ ಬಡ ಮಹಿಳೆ ಚುಕ್ರಿ ಕೊರಗ ಅವರಿಗೆ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮವು ಭಾನುವಾರ ನಡೆಯಿತು.ಈ ಸಂದರ್ಭ ಶಾಸಕ ವಿ. ಸುನಿಲ್ ಕುಮಾರ್, ಸ್ವತಃ ಚುಕ್ರಿ ಕೊರಗ ಅವರ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಸತೀಶ್ ಪೈ, ಲಕ್ಷ್ಮೀನಾರಾಯಣ ನಾಯಕ್, ತಾರಾನಾಥ್ ಬಂಗೇರ, ಸುಧಾಕರ್ ಹೆಗ್ಡೆ, ಅರುಣ್ ಶೆಟ್ಟಿ, ಗಣೇಶ್ ಕುಮಾರ್, ಎಚ್.ಕೆ. ಸುಧಾಕರ್, ಸುರೇಶ್ ಭಂಡಾರಿ, ಪ್ರಸಾದ್ ಭಂಡಾರಿ, ಶಶಿಧರ್, ಭೋಜ ಶೆಟ್ಟಿ, ಚುಕ್ರಿ ಹಾಗೂ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಬಡ ಮಹಿಳೆ ಚುಕ್ರಿ ಕೊರಗ ಹಾಗೂ ಅವರ ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಶೀಥಿಲಾವಸ್ಥೆಯ ಮನೆಯಲ್ಲಿ ವಾಸಿಸುತ್ತಿದ್ದರು. ಮಳೆಯಾದರೆ ಮನೆ ಸೋರುತ್ತಿತ್ತು, ಗೋಡೆಗಳು ಬಿರುಕು ಬಿಟ್ಟಿದ್ದವು, ಮೇಲ್ಛಾವಣಿ ಕುಸಿಯುವ ಸ್ಥಿತಿಯಲ್ಲಿತ್ತು. ಮನೆಯ ಪಕ್ಕದ ಶೌಚಾಲಯವೂ ಮಳೆಗೆ ಕೊಚ್ಚಿಹೋಗಿತ್ತು. ಜೀವನ ಸಂಪೂರ್ಣ ಅಸ್ಥಿರವಾಗಿತ್ತು.

ಈ ದುಸ್ಥಿತಿ ಮನಗಂಡ ಶಾಸಕರು ತಕ್ಷಣ ಕ್ರಮ ಕೈಗೊಂಡು ಚುಕ್ರಿ ಕೊರಗ ಅವರ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಿ ಹಸ್ತಾಂತರಿಸಿದರು.

ಶಾಸಕ ವಿ. ಸುನಿಲ್ ಕುಮಾರ್ ಅವರು ಈ ಹಿಂದೆ ತಮ್ಮ 50ನೇ ಹುಟ್ಟುಹಬ್ಬದ ಸೇವಾ ಕಾರ್ಯದ ಅಂಗವಾಗಿ ಮತ್ತೊಂದು ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು.