ಮಂಚನಾಯಕನಹಳ್ಳಿ ಕಾಂಕ್ರೀಟ್‌ ರಸ್ತೆಗೆ ಚಾಲನೆ

| Published : Mar 05 2024, 01:34 AM IST

ಸಾರಾಂಶ

ಸರ್ಕಾರದಿಂದ ಅಭಿವೃದ್ಧಿಗೆ ಬರುವ ಅನುದಾನದಲ್ಲಿ ಗ್ರಾಮಗಳ ಅಭಿವದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಮಂಚನಾಯಕನಹಳ್ಳಿ ಗ್ರಾಮದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಬೇಲೂರು: ಸರ್ಕಾರದಿಂದ ಅಭಿವೃದ್ಧಿಗೆ ಬರುವ ಅನುದಾನದಲ್ಲಿ ಗ್ರಾಮಗಳ ಅಭಿವದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಮಂಚನಾಯಕನಹಳ್ಳಿ ಗ್ರಾಮದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ವಂಚಿತವಾಗಿರುವ ಗ್ರಾಮದ ರಸ್ತೆಗಳನ್ನು ಗುರುತಿಸಿ ಅಭಿವದ್ಧಿಪಡಿಸುವ ಗುರಿ ಹೊಂದಲಾಗಿದೆ. ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದ ರೀತಿಯಲ್ಲಿ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕೆಂದು ಈಗಾಗಲೇ ತಿಳಿಸಲಾಗಿದೆ. ನಿವಾಸಿಗಳು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ತೆಂಗು ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇಣುಕುಮಾರ್ ಮಾತನಾಡಿ, ರಸ್ತೆ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ನಡೆಸಬೇಕು. ಪ್ರಸಕ್ತ ಸಾಲಿನಲ್ಲಿ ಮಿತ ಅನುದಾನದಲ್ಲಿ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದ್ದು ಲೋಕೋಪಯೋಗಿ ಇಲಾಖೆಯಿಂದ 24 ಲಕ್ಷ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ಧನಂಜಯ, ಬಿಜೆಪಿ ಮುಖಂಡ ಪರ್ವತಯ್ಯ, ಶಿವಣ್ಣ, ವೈ‌.ಡಿ.ಲೋಕೇಶ್, ಪುನೀತ್, ವಸಂತ್ ಶೇಖರ್, ಗುತ್ತಿಗೆದಾರ ಮುರುಳಿ, ಗ್ರಾಮಸ್ಥರು ಇದ್ದರು.

ಮಂಚನಾಯಕನಹಳ್ಳಿ ಗ್ರಾಮದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಸುರೇಶ್ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಧನಂಜಯ, ಬಿಜೆಪಿ ಮುಖಂಡ ಪರ್ವತಯ್ಯ, ಶಿವಣ್ಣ, ವೈ‌.ಡಿ.ಲೋಕೇಶ್, ಪುನೀತ್, ವಸಂತ್ ಶೇಖರ್, ಗುತ್ತಿಗೆದಾರ ಮುರುಳಿ, ಗ್ರಾಮಸ್ಥರು ಇದ್ದರು.