ಸಾರಾಂಶ
ಬಿಜೆಪಿಯು 1992 ರಿಂದಲೂ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿತ್ತು. ಅದರಂತೆ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ಜ. 22 ರಂದು ಭಾರತದ ಎಲ್ಲ ಗಣ್ಯ ಸಮ್ಮುಖದಲ್ಲಿ ನೆರವೇರುತ್ತಿದ್ದು ಅಂತಹ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಬ್ಬದ ವಾತವರಣ ನಿರ್ಮಾಣ ವಾಗಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ದೇವಾಲಯ ಹಾಗೂ ಅಟೋಗಳಿಗೆ ಉಚಿತವಾಗಿ ಶ್ರೀರಾಮನ ಕೇಸರಿ ಧ್ವಜ ನೀಡಲಾಯಿತು.ಶಾಸಕ ಟಿ.ಎಸ್. ಶ್ರೀವತ್ಸ ಈ ಕಾರ್ಯಕ್ಕೆ ಚಾಲನೆ ನೀಡಿದರು. ಕ್ಷೇತ್ರದ ಸುಮಾರು 60 ಆಟೋ ನಿಲ್ದಾಣಗಳಿಗೆ ಖುದ್ದು ಹೋಗಿ 2000 ಧ್ವಜಗಳನ್ನು ವಿತರಿಸಿದರು.
ಜ. 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವ ಅಂಗವಾಗಿ ಹಿಂದೂ ಸಂಸ್ಕೃತಿಯ ಪ್ರತೀಕ ಕೇಸರಿ ಧ್ವಜಗಳನ್ನು ಕ್ಷೇತ್ರದ ಎಲ್ಲಾ ನಗರ ಪಾಲಿಕೆ ಮಾಜಿ ಸದಸ್ಯರು ಹಾಗೂ ಹಿರಿಯ ಮುಖಂಡರೊಡನೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿತರಿಸಲಾಯಿತು.ಬಿಜೆಪಿಯು 1992 ರಿಂದಲೂ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿತ್ತು. ಅದರಂತೆ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ಜ. 22 ರಂದು ಭಾರತದ ಎಲ್ಲ ಗಣ್ಯ ಸಮ್ಮುಖದಲ್ಲಿ ನೆರವೇರುತ್ತಿದ್ದು ಅಂತಹ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಬ್ಬದ ವಾತವರಣ ನಿರ್ಮಾಣ ವಾಗಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸಿದ್ದರಾಜು, ನಗರ ಪಾಲಿಕೆ ಮಾಜಿ ಸದಸ್ಯರು, ಕ್ಷೇತ್ರದ ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ಇದ್ದರು.