ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ ಮೇಟಿ ಸಿದ್ದನಕೊಳ್ಳದ ಸಿದ್ದಪ್ಪಜ್ಜನವರ ದರ್ಶನಾಶೀರ್ವಾದ ಪಡೆದರು.ಈಚೆಗೆ ನಡೆದ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಬಳಿಕ ಪ್ರಥಮ ಬಾರಿಗೆ ಸಿದ್ದನಕೊಳ್ಳಕ್ಕೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಗೆ ಶಕ್ತಿ ಮತ್ತು ಮಾರ್ಗದರ್ಶನ ದೊರೆಯಲಿ ಎಂದು ಪ್ರಾರ್ಥಿಸಿದರು. ಸಿದ್ದಣ್ಣ ಮೇಟಿ, ಬಿ.ಸಿ. ಅಂಟ್ರದಾನಿ, ಸಂಗಣ್ಣ ಹಂಡಿ, ಮುತ್ತಣ್ಣ ಮುಳೂರ, ಸುರೇಶ್ ರಾಜೂರ, ರಾಮನಗೌಡ ಮಾಚ, ಹನುಮಂತ ಕೊಂತ್, ಶರಣಪ್ಪ ಗೋಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಿದ್ದನಕೊಳ್ಳ ಶ್ರೀಗಳ ಆಶೀರ್ವಾದ ಪಡೆದ ಶಾಸಕ ಉಮೇಶ ಮೇಟಿ
ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ ಮೇಟಿ ಸಿದ್ದನಕೊಳ್ಳದ ಸಿದ್ದಪ್ಪಜ್ಜನವರ ದರ್ಶನಾಶೀರ್ವಾದ ಪಡೆದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.