ಸಾರಾಂಶ
ಶುಕ್ರವಾರದಿಂದ ಪ್ರಾರಂಭವಾಗಿರುವ ಎಸ್ಸೆಸ್ಸೆಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಶುಭ ಹಾರೈಸಿ ಆತ್ಮ ವಿಶ್ವಾಸದಿಂದ ಪರೀಕ್ಷೆಗಳನ್ನು ಬರೆಯಲು ಹೇಳಿ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದ್ದಾರೆ.
ಕನ್ನಡಪ್ರಭ ವಾರ್ತೆ ಸವದತ್ತಿ
ಶುಕ್ರವಾರದಿಂದ ಪ್ರಾರಂಭವಾಗಿರುವ ಎಸ್ಸೆಸ್ಸೆಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಶುಭ ಹಾರೈಸಿ ಆತ್ಮ ವಿಶ್ವಾಸದಿಂದ ಪರೀಕ್ಷೆಗಳನ್ನು ಬರೆಯಲು ಹೇಳಿ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದ್ದಾರೆ. ಪಟ್ಟಣದ ಎಸ್.ಕೆ.ಪ್ರೌಢಶಾಲೆಯ ಆವರಣದಲ್ಲಿ ಶಾಸಕರಾದಿಯಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಕೋರಲಾಯಿತು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಬಿಇಒ ಮೋಹನ್ ದಂಡಿನ, ತಾಪಂ ಇಒ ಆನಂದ ಬಡಕುಂದ್ರಿ, ಟಿಎಚ್‌ಒ ಡಾ.ಶ್ರೀಪಾದ ಸಬನೀಸ, ಸಿಪಿಐ ಧರ್ಮಾಕರ ಧರ್ಮಟ್ಟಿ, ಕಿರಣ ಕುರಿ, ಗಿರೀಶ ಮುನವಳ್ಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಎಸ್ಸೆಸ್ಸೆಲ್ಸಿ ಪರೀಕ್ಷೆ ಎಲ್ಲರ ಜೀವನದಲ್ಲಿ ಅತಿ ಮುಖ್ಯ ಪರೀಕ್ಷೆಯಾಗಿದ್ದು, ತಾಲೂಕಿನಾದ್ಯಂತ ಶಿಕ್ಷಣ ಇಲಾಖೆಯಿಂದ ಅಚ್ಚುಕಟ್ಟಾಗಿ ಪರೀಕ್ಷಾ ತಯಾರಿಯಾಗಿದೆ. ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾನೆ.-ವಿಶ್ವಾಸ ವೈದ್ಯ,
ಶಾಸಕರು.