ಮಂಗಳೂರಲ್ಲಿ ಪ್ರವಾಹ ತಲೆದೋರಿದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್‌ ಭೇಟಿ

| Published : Jun 27 2025, 12:48 AM IST

ಮಂಗಳೂರಲ್ಲಿ ಪ್ರವಾಹ ತಲೆದೋರಿದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್‌ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಶಾಸಕರು ಭೇಟಿ ನೀಡಿದರು. ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ರು. ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ಬಿಟ್ಟರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಲ್ಲಿನ ಸಣ್ಣಪುಟ್ಟ ತುರ್ತುಕ್ರಮಕ್ಕೂ ಬಿಡಿಗಾಸು ದೊರೆಯುತ್ತಿಲ್ಲ. ಇದರಿಂದಾಗಿ ವಿಶೇಷವಾಗಿ ಮಳೆಗಾಲದ ಸಮಯದಲ್ಲಿ ಸ್ಥಳೀಯ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ತರತ್ತೇನೆ ಎಂದರು.

ಈ ಸಂದರ್ಭ ಮಾಜಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ವಿವೇಕ್, ಪ್ರಶಾಂತ್ ಆಳ್ವ ಮತ್ತಿತರರಿದ್ದರು.