ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಾಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್‌ಟಿಪಿ ಲಗೂನ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಘಟಕದ ಸುತ್ತಲೂ ದುರ್ವಾಸನೆ ತಡೆಗಟ್ಟಲು ತ್ಯಾಜ್ಯ ನೀರು ಸಂಸ್ಕರಣೆ ಕಾರ್ಯ ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಿದರು.ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಾಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್‌ಟಿಪಿ ಲಗೂನ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಘಟಕದ ಸುತ್ತಲೂ ದುರ್ವಾಸನೆ ತಡೆಗಟ್ಟಲು ತ್ಯಾಜ್ಯ ನೀರು ಸಂಸ್ಕರಣೆ ಕಾರ್ಯ ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಲಾಯಿತು.
ನಗರದ ಜ್ಞಾನಯೋಗಾಶ್ರಮಕ್ಕೆ ಸಾವಿರಾರು ಭಕ್ತರು ಗುರು ಪೂರ್ಣಿಮಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದರಿಂದ ಆಶ್ರಮಕ್ಕೆ ಕೂಡುವ ಎಲ್ಲ ಮುಖ್ಯ ರಸ್ತೆಗಳಲ್ಲಿರುವ ತಗ್ಗು ಗುಂಡಿಗಳನ್ನು ಮುಚ್ಚುವುದು, ಬೀದಿ ದೀಪಗಳನ್ನು ದುರಸ್ತಿಗೊಳಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಸೂಚಿಸಿದರು.ಮಹಾನಗರ ಪಾಲಿಕೆ ಮೇಯರ್ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳ ಇದ್ದರು.