ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಅವರನ್ನು ಶಾಸಕ ಯಶ್ ಪಾಲ್ ಸುವರ್ಣ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಉಡುಪಿ; ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಅಧ್ಯಕ್ಷರಾದ ಡಾ. ಕೆ. ಲಕ್ಷ್ಮಣ್, ಪದಾಧಿಕಾರಿಗಳಾದ ಸಂಗಮ್ ಲಾಲ್ ಗುಪ್ತ, ನಿಖಿಲ್ ಆನಂದ್ ಉಪಸ್ಥಿತರಿದ್ದರು.