ಸಾರಾಂಶ
ಹುಬ್ಬಳ್ಳಿ:ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ಬಹುಮತ ಕೊಟ್ಟಿದ್ದರೂ ದ್ರೋಹ ಬಗೆಯುತ್ತಿದ್ದಾರೆ. ಕುರ್ಚಿಗಾಗಿ ಶಾಸಕರ ಖರೀದಿಗೆ ಇಳಿದಿದ್ದಾರೆ. ಜೈಲಿಗೂ ಹೋಗಿ ಭೇಟಿಯಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ಆಡಳಿತ ಮರೆತಿದೆ. ರಾಜ್ಯದ ಜನ, ರೈತರು ಸಂಕಷ್ಟದಲ್ಲಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಂಗಳೂರಿನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇದನ್ನೆಲ್ಲ ನೋಡಿದರೆ ಸರ್ಕಾರಕ್ಕೆ ಆಡಳಿತದ ಕಡೆಗೆ ಗಮನ ಕಡಿಮೆ ಆಗಿದೆ. ಸಂಪೂರ್ಣ ಸರ್ಕಾರ ವಿಫಲವಾಗಿದೆ ಎಂದರು.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಶಾಸಕರು ಚೀಟಿ ಕೊಟ್ಟು ವರ್ಗಾವಣೆ ಮಾಡಿಸುತ್ತಿದ್ದಾರೆ. ಇದು ದಂಧೆಯಾಗಿದೆ. ಈ ಜಗಳದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿಲ್ಲ. ನೀರಾವರಿ ಯೋಜನೆಗಳಿಗೆ ಹಣವಿಲ್ಲ. ಇದರ ನಡುವೆ ಸಿಎಂ-ಡಿಸಿಎಂ ನಡುವೆ ಕುರ್ಚಿಗಾಗಿ ಗುದ್ದಾಟ ಶುರುವಾಗಿದ್ದು, ವೋಟಿಂಗ್‌ನಲ್ಲಿ ತಮ್ಮ ನಂಬರ್ ಹೊಂದಿಸುವುದಕ್ಕೆ ಇಳಿದಿದ್ದಾರೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಭವ ಹೊಂದಿದ ವ್ಯಕ್ತಿ. ಯಾವುದೇ ವಿಷಯವಿರಲಿ ವಿಚಾರ ಮಾಡಿ ಮಾತನಾಡಬೇಕು. ಸಿದ್ದರಾಮಯ್ಯ ಅವರಿಗೆ ಹಿರಿತನ ಇದೆ, ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ ಎಂದ ಅವರು, ಖಾನೆ ಕೇಲಿಯೇ ಮೈ, ಲಡನೆ ಕೇಲಿಯೇ ಬಡಾ ಭಾಯ್.. ಎನ್ನುವ ನೀತಿ ಸಿದ್ದರಾಮಯ್ಯ ಅವರದ್ದಾಗಿದೆ. ಆಗಸ್ಟ್ ತಿಂಗಳಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ಈ ನಡುವೆ ಡೀಸೆಲ್, ಪೆಟ್ರೋಲ್, ವಿದ್ಯುತ್ ಸೇರಿ ಹಲವು ದರ ರಾತ್ರೋರಾತ್ರಿ ಹೆಚ್ಚಾಗುತ್ತದೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರು ಹೊಸ ಸುಳ್ಳು ಹೇಳಿದ್ದಾರೆ. ಮೆಕ್ಕೆಜೋಳ ೭೦ ಲಕ್ಷ ಟನ್ ಆಮದು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದು ಎಲ್ಲಿಂದ ಅಂಕಿ ಸಂಖ್ಯೆ ಬಂದಿದೆ. ನಾವು ರಫ್ತು ಮಾಡಿದ್ದೇವೆ. ೯೦೦ ಕೋಟಿಯಷ್ಟು ರಫ್ತು ಮಾಡಿದ್ದೇವೆ. ಸುಳ್ಳು ಹೇಳುವುದಕ್ಕೆ ಏನಾದರೂ ಇರಬೇಕು. ನಾನು ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರ ಬರೆದಿದ್ದೇನೆ. ಆದರೆ, ಅವರು ಉತ್ತರ ಕೊಟ್ಟಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಿಟ್ಟು ಸಿಎಂ ಬೇಕು ಎಂದು ಒಬ್ಬರು, ಸಿಎಂ ಬೇಡ ಎಂದು ಹೇಳಲು ದೆಹಲಿಗೆ ಹೋಗುತ್ತಾರೆ ಎಂದು ದೂರಿದರು.ಏಕನಾಥ ಶಿಂಧೆ ಮಾಡಲು ನಾವು ಬಯಸುವುದಿಲ್ಲರಾಜ್ಯದಲ್ಲಿ ಅಸ್ಥಿರತೆ ನಡುವೆಯೂ ಯಾರನ್ನೋ ಕರೆದುಕೊಂಡು ಬಂದು ಏಕನಾಥ ಶಿಂಧೆ ಮಾಡಲು ನಾವು ಬಯಸುವುದಿಲ್ಲ. ಅಂಥ ಪ್ರಯತ್ನಕ್ಕೆ ನಾವು ಕೈಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ರಾಜ್ಯ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಜನರು ಪೂರ್ಣ ಬಹುಮತ ನೀಡಿದ್ದಾರೆ. ಅವರು ೫ ವರ್ಷ ಅಧಿಕಾರ ನಡೆಸಲಿ. ಆದರೆ, ಒಳ್ಳೆಯ ಆಡಳಿತ ನೀಡಲಿ. ಮಹಾರಾಷ್ಟ್ರದಲ್ಲಿ ನಾವು ಬಹುಮತ ಗಳಿಸದಿದ್ದರೂ ಅತಿ ದೊಡ್ಡ ಪಕ್ಷವಾಗಿದ್ದೇವು. ನಮಗೆ ಜನಮನ್ನಣೆ ಇತ್ತು. ಏಕನಾಥ ಶಿಂಧೆ ಶಿವಸೇನೆಯಿಂದ ಹೊರಗೆ ಬಂದು ನಮ್ಮ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದೇವು. ಕರ್ನಾಟಕದಲ್ಲಿ ಹಾಗೇ ಆಗುವುದಿಲ್ಲ ಎಂದು ಹೇಳಿದರು.
ಇಂಡಿ ಗಟಬಂಧನ ಅನೈಸರ್ಗಿಕವಾಗಿ ಹುಟ್ಟಿದ್ದು ಸಾಯೋದು ಖಚಿತ. ರಾಹುಲ್ ಗಾಂಧಿ ಅವರಿಗೆ ಇಂಡಿಯಾ ಫುಲ್ ಫಾರ್ಮ್ ಕೇಳಿ ಗೊತ್ತಿರಲ್ಲ ಎಂದರು.;Resize=(128,128))
;Resize=(128,128))
;Resize=(128,128))
;Resize=(128,128))