ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಾಸಕರಿಂದ ಚಾಲನೆ

| Published : Sep 26 2024, 09:46 AM IST

ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಾಸಕರಿಂದ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ 1591.6 ಕೋಟಿ ಆರ್ಥಿಕ ಅನುದಾನದಲ್ಲಿ ಮೊಟ್ಟೆ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೂರಕ ಆಹಾರವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪ ದೋಷವಾಗದಂತೆ ಮುನ್ನೆಚ್ಚರಿಕೆ ವಹಿಸಲು ಉಪ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸರ್ಕಾರ ಹಾಗೂ ಅನುದಾನಿತ 1ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಾಸಕ ಹಾಗೂ ಸೆಸ್ಕಾಂ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ ಚಾಲನೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿ, ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿ, ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕ ಆಹಾರ ನೀಡಲು ವಾರಕ್ಕೆ 2 ದಿನ ಮೊಟ್ಟೆ ವಿತರಿಸುತ್ತಿದೆ ಎಂದರು.

ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ 1591.6 ಕೋಟಿ ಆರ್ಥಿಕ ಅನುದಾನದಲ್ಲಿ ಮೊಟ್ಟೆ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೂರಕ ಆಹಾರವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪ ದೋಷವಾಗದಂತೆ ಮುನ್ನೆಚ್ಚರಿಕೆ ವಹಿಸಲು ಉಪ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದರು.

ಉಪನಿರ್ದೇಶಕ ಶಿವರಾಮೇಗೌಡ ಮಾತನಾಡಿ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ.ಮಹೇಶ್ ಮಾತನಾಡಿದರು. ಪುರಸಭಾ ಸದಸ್ಯ ಎಂ.ಎಲ್.ದಿನೇಶ್, ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಚೆಲುವಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಂದೀಶ್, ಪ್ರಾಂಶುಪಾಲ ಜಯಶಂಕರಪ್ಪ, ಬಿಆರ್‌ಸಿ ಡಾ. ಪ್ರಭಾ ನಂಜಪ್ಪ, ಕಜಾಪ ಅಧ್ಯಕ್ಷ ಸಿದ್ದಲಿಂಗು, ಉಪ ಪ್ರಾಂಶುಪಾಲ ಅಶೋಕ್ ಕುಮಾರ್, ಹಿರಿಯ ಗಾಂಧಿವಾದಿ ಸುಜಯ್ ಕುಮಾರ್, ಎಸ್‌ಡಿಎಂಸಿ ಸದಸ್ಯ ಕೂಡಲಕುಪ್ಪೆ ಸೋಮಶೇಖರ್, ನಳಿನ, ಅಜೀಮ್ ಪ್ರೇಮ್ ಜಿ ಫೌಂಡೇಶನ್ ತಾಲ್ಲೂಕು ಸಂಯೋಜಕ ಚೇತನ್ ಸೇರಿದಂತೆ ಶಿಕ್ಷಕರಾದ ಸವಿತಾ ಪುಷ್ಪ, ಸ್ವಪ್ನ, ಶ್ರೀನಿವಾಸ್, ರಘು, ಕುಮಾರಸ್ವಾಮಿ, ಶಶಿಧರ್, ಮನೋಜ್ ಇತರರು ಇದ್ದರು.