ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

| Published : Jul 24 2024, 12:16 AM IST

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಮೇಲುಕೋಟೆ ಸೇರಿದಂತೆ ತಾಲೂಕು ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲಾಖೆಗಳು ಒಂದೆಡೆ ಕೆಲಸ ಮಾಡಲು ವಿಕಾಶಸೌಧ ನಿರ್ಮಾಣದ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ನೀಲನಹಳ್ಳಿ ಹಾಗೂ ಮೇಲುಕೋಟೆ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕಿನ ನೀಲನಹಳ್ಳಿಯಲ್ಲಿ 50 ಲಕ್ಷ ರು. ಪರಿಶಿಷ್ಟ ಜಾತಿ ಕಾಲೂನಿಗೆ ಸಂಪರ್ಕಿಸುವ ರಸ್ತೆಯನ್ನು ಹಾಗೂ ಮೇಲುಕೋಟೆ ಗ್ರಾಮದಲ್ಲಿ 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕರು, ಎರಡು ಗ್ರಾಮಗಳ ಪರಿಶಿಷ್ಟ ಕಾಲೂನಿಗಳಲ್ಲಿ ಸಂಪರ್ಕ ರಸ್ತೆಗಳನ್ನು ಸಮಾಜ ಕಲ್ಯಾಣ ಇಲಾಖೆ 1 ಕೋಟಿ ರು. ವೆಚ್ಚದ ಅನುದಾನದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದರು.

ಮೇಲುಕೋಟೆ ಸೇರಿದಂತೆ ತಾಲೂಕು ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲಾಖೆಗಳು ಒಂದೆಡೆ ಕೆಲಸ ಮಾಡಲು ವಿಕಾಶಸೌಧ ನಿರ್ಮಾಣದ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈ ವೇಳೆ ಮುಖಂಡರಾದ ಕೆ.ಎಸ್.ದಯಾನಂದ್, ಉದ್ಯಮಿ ಪರಮೇಶ್‌ಗೌಡ, ವಿಜೇಂದ್ರ, ಸಿ.ಆರ್.ರಮೇಶ್, ಕೋಕಿಲ ಜ್ಞಾನೇಶ್, ಕುಮಾರ್, ದೇವರಾಜು, ಯೋಗನರಸಿಂಹೇಗೌಡ,ಗ್ರಾಪಂ ಅಧ್ಯಕ್ಷೆ ಮಣಿಮುರುಗನ್, ಸದಸ್ಯ ಜಯರಾಮೇಗೌಡ, ಪಿಡಿಒ ರಾಜೇಶ್ವರ ಸೇರಿದಂತೆ ಹಲವರು ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

ಲಕ್ಷ್ಮಿಸಾಗರ ಗ್ರಾಮದ ಶಾಲೆಯಲ್ಲಿ ಮೂರು ಹೆಚ್ಚುವರಿ ಕೊಠಡಿಗಳ ಉದ್ಘಾಟನೆ

ಪಾಂಡವಪುರ:ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ಅನುದಾನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ 3 ಹೆಚ್ಚುವರಿ ಕಟ್ಟಡಗಳನ್ನು ಶಾಸಕ ದರ್ಶನ್‌ಪುಟ್ಟಣ್ಣಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ದರ್ಶನ್‌ಪುಟ್ಟಣ್ಣಯ್ಯ, ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಕ್ಕಳಿಗೆ ಕೊಠಡಿಗಳ ಸಮಸ್ಯೆ ಉಂಟಾಗಿದ್ದ ಹಿನ್ನೆಲೆಯಲ್ಲಿ 16 ಲಕ್ಷ ರು. ವೆಚ್ಚದಲ್ಲಿ ಮೂರು ಹೆಚ್ಚುವರಿ ಹೊಸ ಕೊಠಡಿ ನಿರ್ಮಾಣಗೊಂಡಿವೆ ಎಂದರು.ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮವಹಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸುವ ಜತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಹಕಾರ ನೀಡಲಾಗುವುದು ಎಂದರು.

ಲಕ್ಷ್ಮೀಸಾಗರ ಗ್ರಾಮದಲ್ಲಿ ಇರುವ ಶಿಕ್ಷಣ ಇಲಾಖೆಗೆ ಸೇರಿದ ಸಿಆರ್‌ಸಿ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಅದನ್ನು ತೆರವುಗೊಳಿಸಿ ಹೊಸಕಟ್ಟ ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಸರ್ಕಾರಿ ಶಾಲೆಗೆ ಮತ್ತಷ್ಟು ಹೆಚ್ಚುವರಿ ಕೊಠಡಿಗಳು, ಆಟದ ಮೈದಾನ, ಶಾಲಾ ಕಾಂಪೌಂಡ್, ಹೇಮಾವತಿ ನಾಲೆ ಅಭಿವೃದ್ಧಿ, ರಸ್ತೆ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಬಿಇಒ ರವಿಕುಮಾರ್, ಬಿಆರ್‌ಸಿ ಪ್ರಕಾಶ್, ಜಿಪಂ ಎಇ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ನವೀನ್‌ಕುಮಾರ್, ಮುಖ್ಯಶಿಕ್ಷಕಿ ಲತಾ, ಮುಖಂಡರಾದ ಎಲ್.ಬಿ.ರವಿ, ಎಲ್.ಬಿ.ಕೆಂಪೇಗೌಡ, ಎಲ್.ಆರ್.ಅಶೋಕ್, ಆನಂತಮೂರ್ತಿ, ಎಲ್.ಕೆ.ಸತೀಶ್, ಎಲ್.ಡಿ.ಮರೀಗೌಡ, ಬೆಟ್ಟೇಗೌಡ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.