ಸಾರಾಂಶ
ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ತಿಪಟೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ತಿಪಟೂರು
ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ತಿಪಟೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.ನಗರದ ಕಾಸ್ಮೋ ಪಾಲಿಟನ್ ಕ್ಲಬ್ ಪಕ್ಕದಲ್ಲಿ ಸುಮಾರು ೨೦ಕೋಟಿ ರು. ವೆಚ್ಚದ ಮಂಡ್ಯ-ಹಡಗಲಿ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್.ಎಚ್.ಡಿ.ಸಿ ಯೋಜನೆ ಅಡಿಯಲ್ಲಿ ನಗರದ ಪ್ರವಾಸಿ ಮಂದಿರದಿಂದ ಹುಳಿಯಾರ್ ರಸ್ತೆ ಮಂಜುನಾಥ ನಗರದ ಬೈಪಾಸ್‌ವರೆಗೆ ಎರಡು ಕಾಲು ಕಿಲೋ ಮೀಟರ್ ಚತುಷ್ಪಥ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ಹುಣಸೇಘಟ್ಟ ಗ್ರಾಮದ ಹೆದ್ದಾರಿ ರಸ್ತೆ ೧೨ ಕೋಟಿ ರುಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆಗಲಿದೆ. ಇತ್ತೀಚಿನ ದಿನಗಳಲ್ಲಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಖ್ಯೆ ಜನದಟ್ಟಣೆ ಹೆಚ್ಚಾಗಿದ್ದು ರಸ್ತೆ ಅಭಿವೃದ್ಧಿ ಪಡಿಸುವ ಯೋಜನೆ ಇದಾಗಿದೆ ಎಂದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್, ಉಪಾಧ್ಯಕ್ಷೆ ಮೇಘಶ್ರೀ ಭೂಷಣ, ನಗರಸಭಾ ಸದಸ್ಯರಾದ ಪ್ರಕಾಶ್, ಯೋಗೇಶ್, ಲೋಕನಾಥ್ ಸಿಂಗ್, ಶಶಿಕಿರಣ್, ಮುಖಂಡರಾದ ಹೊಸಹಳ್ಳಿ ಬಸವರಾಜು, ಆಲದಹಳ್ಳಿ ವಿಶ್ವನಾಥ್, ರಘು, ಉದಯರವಿ, ಮಧು ಪಟೇಲ್ ಮತ್ತಿತರರಿದ್ದರು.