ಸಾರಾಂಶ
ಚಿಕ್ಕಮಗಳೂರು, ಶಾಸಕ ಎಚ್.ಡಿ.ತಮ್ಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ತಂದಿರುವ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ.
- ಶಾಸಕ ಎಚ್.ಡಿ.ತಮ್ಮಯ್ಯ ಅವರ ಒಂದು ವರ್ಷದ ಸಾಧನೆ ಶೂನ್ಯಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಶಾಸಕ ಎಚ್.ಡಿ.ತಮ್ಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ತಂದಿರುವ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ.ಶಾಸಕ ಎಚ್.ಡಿ.ತಮ್ಮಯ್ಯ ಅವರ ಒಂದು ವರ್ಷದ ಸಾಧನೆ ಶೂನ್ಯವಾಗಿದೆ. ಅವರು ಶ್ರಮ ಹಾಕಿ ಯಾವುದೇ ವಿಶೇಷ ಅನುದಾನ ತಾರದಿದ್ದರೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಒಂದು ವರ್ಷದಲ್ಲಿ 164 ಕೋಟಿ ರು. ಅನುದಾನ ತಂದಿದ್ದೇನೆ ಎಂದು ಹೇಳುವ ಮೂಲಕ ಮತದಾರರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರು ಕೂಡಲೇ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮೆಡಿಕಲ್ ಕಾಲೇಜು, ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಗಳು ಸಿ.ಟಿ.ರವಿ ಅವರು ಶಾಸಕರಾಗಿದ್ದಾಗಲೇ ಮಂಜೂರಾಗಿದ್ದವು. ಅವುಗಳಿಗೆ ಹಂತಹಂತವಾಗಿ ಅನುದಾನ ಬಿಡುಗಡೆ ಆಗುವುದು ಸಹಜ. ಆದರೆ ಅದೂ ಕೂಡ ನನ್ನ ಸಾಧನೆ ಎಂದು ಶಾಸಕರು ಹೇಳಿಕೊಂಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.ಸೋಮಶೇಖರಪ್ಪ ಮಾತನಾಡಿ, ವಿಧಾನಪರಿಷತ್ ಚುನಾವಣಾ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೇ 26 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ವಕ್ತಾರ ಕೋಟೆ ದಿನೇಶ್, ಸಚಿನ್ ಇದ್ದರು.ಪೋಟೋ ಫೈಲ್ ನೇಮ್ 24 ಕೆಸಿಕೆಎಂ 5