ಸಾರಾಂಶ
ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದೆ ಎಂದು ಭೋಜೇಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಕಾಪು
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ ಮತ್ತು ಅವರ ಪತ್ನಿ ತರ್ಪಣ ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭ ಸಂದರ್ಭದಲ್ಲಿ ಕಾಪು ಮಾರಿಗುಡಿಗೆ ಆಗಮಿಸಿ ಅಮ್ಮನ ದರ್ಶನ ಪಡೆದರು.ಅವರಿಗೆ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರ ಸಮ್ಮುಖದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ಶ್ರೀ ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭ ಮಾತನಾಡಿದ ಭೋಜೇಗೌಡ, ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಅಭಿವೃದ್ಧಿ ಸಮಿತಿಯ ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್, ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.